ಬೆಂಗಳೂರು: ಆಪಲ್ ಏರ್ ಪಾಡ್ ಉತ್ಪಾದನಾ ಘಟಕವನ್ನು ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಥಳಾಂತರಗೊಳಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರ ಒಂದು ಹರಿದಾಡುತ್ತಿದೆ. ಆದರೆ ಇದು ನಕಲಿ ಪಾತ್ರವಾಗಿದೆ.

ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಕುಮಾರ್, ಆಪಲ್ ಏರ್ ಪಾಡ್ ಉತ್ಪಾದನಾ ಘಟಕವನ್ನು ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಥಳಾಂತರಗೊಳಿಸುವಂತೆ ಫಾಕ್ಸ್ ಕಾನ್ ಸಂಸ್ಥೆಗೆ ನಾನು ಬರೆದಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾಗಿದ್ದು, ಈ ಸಂಬಂಧ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.




