ಬೆಂಗಳೂರು: ಕೆಪಿಎಸ್ಸಿ ನಡೆಸಿದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ಪರೀಕ್ಷಾರ್ಥಿಗಳಲ್ಲಿ ಹಲವರು ದಯಾಮರಣ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಪತ್ರ ಬರೆದಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹುದ್ದೆಗಳ ನೇಮಕಾತಿಗೆ ಡಿ. 29ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ್ದ ಪ್ರಶ್ನೆ ಮತ್ತು ಉತ್ತರಗಳಲ್ಲಿ ಲೋಪದ ಕಾರಣಕ್ಕೆ ಮತ್ತೆ ಪೂರ್ವಭಾವಿ ಪರೀಕ್ಷೆ ನಡೆಸಬೇಕು ಎಂದು ಅಭ್ಯರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಈ ಮಧ್ಯೆ ಮೇ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿ ಮಾಡಿದೆ.
ನ್ಯಾಯ ಕೋರಿ ಅರ್ಜಿ ಸಲ್ಲಿಸಿದ್ದ 185 ಜನಕ್ಕೆ, ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಅವಕಾಶ ನೀಡಿದೆ. ಆದರೆ ಭಾಷಾಂತರದ ತಪ್ಪುಗಳಿಂದ ಕನ್ನಡ ಮಾಧ್ಯಮದ ಸುಮಾರು 70,000 ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹಣಕಾಸಿನ ಸಮಸ್ಯೆ ಕಾರಣಕ್ಕೆ ಎಲ್ಲರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಅವರೆಲ್ಲರಿಗೆ ಈಗ ಪರೀಕ್ಷೆ ಮತ್ತು ನ್ಯಾಯದ ಬಾಗಿಲುಗಳು ಮುಚ್ಚಿದಂತಾಗಿದೆ ಎಂದು ಅಭ್ಯರ್ಥಿಗಳು ಪತ್ರದಲ್ಲಿ ವಿವರಿಸಿದ್ದಾರೆ.
ಈಗ ನಮ್ಮ ಕನಸು ಮತ್ತು ಅದನ್ನು ನನಸು ಮಾಡಿಕೊಳ್ಳುವ ಅವಕಾಶಗಳೆಲ್ಲಾ ಸುಟ್ಟುಹೋಗಿವೆ. ನಮಗೀಗ ಇರುವ ದಾರಿ ದಯಾಮರಣ ಮಾತ್ರ. ನಮ್ಮ ಮನವಿಯನ್ನು ಪುರಸ್ಕರಿಸಿ ಎಂದು ಕೋರಿದ್ದಾರೆ.




