ಫೆ.14 ರಿಂದ ಫೆ.18 ವರೆಗೆ ಗರಗ ಜಾತ್ರೆ
ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ
ಧಾರವಾಡ: ಫೆಬ್ರವರಿ 14 ರಿಂದ 18 ವರೆಗೆ ಜರುಗಲಿರುವ ಗರಗ ಜಾತ್ರೆಯ ಪ್ರಯುಕ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1) ನೇದ್ದರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಧಾರವಾಡ ತಾಲ್ಲೂಕಿನ ಬೇಲೂರ, ಗರಗ, ಉಪ್ಪಿನಬೇಟಗೇರಿ, ತೇಗೂರು ಗ್ರಾಮಗಳಲ್ಲಿ (ಗರಗ ಜಾತ್ರೆಯ ದಿನಗಳಂದು) ಫೆಬ್ರವರಿ 14, 2025 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 18, 2025 ರಾತ್ರಿ 10 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಅವಧಿಯಲ್ಲಿ ಧಾರವಾಡ ತಾಲ್ಲೂಕಿನ ಬೇಲೂರ, ಗರಗ, ಉಪ್ಪಿನಬೇಟಗೇರಿ, ತೇಗೂರು ಗ್ರಾಮಗಳಲ್ಲಿ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀಯರ-ಬಾರಗಳು, ಕ್ಲಬ್ಗೊಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು. ಇದಲ್ಲದೆ ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನಸ್ಪೆಕ್ಟರರು ಹಾಗೂ ಉಪವಿಭಾಗದ ಅಬಕಾರಿ ಅಧೀಕ್ಷಕರು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (2) ರ ನೇದ್ದರರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.
ಅಬಕಾರಿ ಉಪ ಆಯುಕ್ತರು, ಧಾರವಾಡ, ಮತ್ತು ಆರಕ್ಷಕ ಅಧೀಕ್ಷಕರು ಧಾರವಾಡ, ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಧಾರವಾಡ ಮತ್ತು ಅಬಕಾರಿ ಉಪ ಅಧೀಕ್ಷಕರು, (ವಿಚಕ್ಷಕ ದಳ) ಹುಬ್ಬಳ್ಳಿ ಇವರುಗಳು ತಮ್ಮ ವ್ಯಾಪ್ತಿಯಲ್ಲಿ ಹೊರಡಿಸಲಾದ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕೆಂದು ಅವರು ತಿಳಿಸಿದ್ದಾರೆ.




