ಎಲ್ಲರ ಅಭಿಪ್ರಾಯ ಪಡೆದು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ: ಸಿದ್ದರಾಮಯ್ಯ

2 years ago

ದಾವಣಗೆರೆ: ಎಲ್ಲರ ಅಭಿಪ್ರಾಯ ಪಡೆದು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ. ಸಮೀಕ್ಷೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

ಬಾಗೂರು ಚನ್ನಕೇಶವ ದೇವಸ್ಥಾನದೊಳಗೆ ಈಶ್ವರಾನಂದ ಸ್ವಾಮೀಜಿ ಅವರನ್ನು ಬಿಟ್ಟಿಲ್ಲ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದರು.

ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಕುರಿತು ಪ್ರತಿಕ್ರಿಯಿಸಿ, ಅಡ್ವಾಣಿಯವರಿಗೆ ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದರು.

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಅವರು ಪ್ರತಿಕ್ರಿಯಿಸಿ, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದರು.

Leave a Reply