ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ವಿದ್ಯುತ್ ಪೂರೈಕೆ ಇದೆ. ಬೇಸಿಗೆಯಲ್ಲಿ ಬೇಕಾಗುವ ವಿದ್ಯುತ್ ಪೂರೈಸಲು ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ವಿಧಾನಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿಯ ಶಾಸಕ ಸಿದ್ದು ಸವದಿ, ವಿದ್ಯುತ್ ಕಡಿತದ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಕೆ ಜೆ ಜಾರ್ಜ್, ಪಂಪ್ ಸೆಟ್‌ಗಳಿಗೆ ಇಡೀ ರಾಜ್ಯದಲ್ಲಿ ಪವರ್ ಕಟ್ ಇಲ್ಲ. 7 ಗಂಟೆ ವಿದ್ಯುತ್ ನೀಡುತ್ತಿದ್ದೇವೆ. ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಕಡಿತವಾಗಬಹುದು. ಇತ್ತೀಚೆಗೆ ಎಸ್ಕಾಂಗಳ ಸಭೆ ನಡೆಸಿದಾಗ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಎಂದರು.
ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಪ್ರಮಾಣವಿದೆ. ಆದರೂ ಇದನ್ನು ವಿದ್ಯುತ್ ಉತ್ಪಾದನೆಗೆ ಬಳಸುತ್ತಿಲ್ಲ. ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಸೌರ ವಿದ್ಯುತ್ ಘಟಕಗಳು ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಎಷ್ಟು ಬೇಡಿಕೆ ಬಂದರೂ ಅದನ್ನು ಪೂರೈಸಲು ಸಮರ್ಥವಾಗಿದ್ದೇವೆ ಎಂದರು.



