ದಾವಣಗೆರೆ / ಬೆಂಗಳೂರು: ಮಟ್ಕಾ ಆಡಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪೊಲೀಸರು ವ್ಯಕ್ತಿ ಒಬ್ಬನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದ ಕೆಲ ಹೊತ್ತಿನಲ್ಲಿಯೇ ಆತ ಮೃತಪಟ್ಟಿದ್ದಾನೆ. ಇದು ಲಾಕ್ ಅಪ್ ಡೆತ್ ಎಂದು ಆರೋಪಿಸಿದ ಆತನ ಸಂಬಂಧಿಕರು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಪರಿಣಾಮ ಬಿಗುವಿನ ವಾತಾವರಣ ಸೃಷ್ಟಿಯಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಮೃತನ ಸಂಬಂಧಿಕರು ಏಕಾಏಕಿ ರೊಚ್ಚಿಗೆದ್ದು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊಂಡಿವೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದರು. ಕೃತ್ಯದಲ್ಲಿ ತೊಡಗಿದ್ದ ಕೆಲವರನ್ನು ಪತ್ತೆ ಹಚ್ಚಿದ್ದು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಮಟ್ಕ ಆಡಿಸುತ್ತಿದ್ದ ಆರೋಪದ ಮೇಲೆ ಆದಿಲ್ (30) ಎಂಬ ಯುವಕನನ್ನು ಠಾಣೆಗೆ ಕರೆತಂದ ಐದಾರು ನಿಮಿಷದಲ್ಲಿಯೇ ಆತನ ಆರೋಗ್ಯದಲ್ಲಿ ಏರಿಪೇರಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಆದರೂ ಕೂಡ ಈತನ ಸಂಬಂಧಿಕರು ಲಾಕಪ್ ಡೆತ್ ಎಂದು ಹೇಳುತ್ತಿದ್ದಾರೆ. ನಮಲ್ಲಿ ಸಿಸಿ ಕ್ಯಾಮೆರಾ ಇದ್ದು ಪರಿಶೀಲನೆ ಮಾಡಿ ಪ್ರಮಾಣಿಕ ತನಿಖೆ ನಡೆಸುತ್ತೇವೆ ಎಂದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು, ತಲೆ ಕತ್ತರಿಸುತ್ತೇವೆ ಎಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ದೂರೊಂದರ ವಿಚಾರಣೆಗಾಗಿ ವ್ಯಕ್ತಿಯೊಬ್ಬನನ್ನು ಪೊಲೀಸ್ ಠಾಣೆ ಕರೆತರಲಾಗಿತ್ತು. ಆತ ಅಲ್ಲಿ 7 ನಿಮಿಷ ಮಾತ್ರ ಉಳಿದಿದ್ದು, ಸಾವನ್ನಪ್ಪಿದ್ದಾನೆ ಎಂದರು.
ಪೊಲೀಸರ ಹಲ್ಲೆಯಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಭಾವಿಸಿ ಆತನ ಕಡೆಯವರು ಪ್ರತಿಭಟನೆ ಮಾಡಿ ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ಈ ವೇಳೆ ಟಿಯರ್ ಗ್ಯಾಸ್ ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಲ್ಲು ತೂರಾಟದಿಂದ ಅಲ್ಲಿದ್ದವರಿಗೆ ಗಾಯಗಳಾಗಿವೆ ಎಂದರು.
ವ್ಯಕ್ತಿಯ ಸಾವಿಗೆ ನಿಖರ ಕಾರಣಗಳೇನು ಎಂದು ತಿಳಿಯಲು ಶವಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಅವರು, ಠಾಣೆಗೆ ಬಂದು ಧಮ್ಕಿ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಕೆಜೆ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲಿ ಗಲಭೆ ಮಾಡಲು ಚನ್ನಗಿರಿಯಲ್ಲೂ ಸಂಚು ನಡೆದಿತ್ತು ಎಂಬುದನ್ನು ನಾನು ಕೇಳಿಸಿಕೊಂಡಿದ್ದೇನೆ ಎಂದರು.




