ಚೆಕ್ಪೋಸ್ಟ್ಗಳಲ್ಲಿ ಮುಂದುವರೆದ ಕಾರ್ಯಾಚರಣೆ
ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಗೊಂಡಿದೆ. ಚೆಕ್ಪೋಸ್ಟ್ಗಳಲ್ಲಿ ಬಿಗಿಭದ್ರತೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಮಂಗಳವಾರ ಅನಧಿಕೃತವಾಗಿ ಸಾಗಿಸುತ್ತಿದ್ದ 390.62 ಲೀಟರ್ (ರೂ.1,49,334 ಮೌಲ್ಯ) ಮದ್ಯ ಮತ್ತು ವಾಹನ ಜಪ್ತಿ ಮಾಡಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಅಬಕಾರಿ ಪೊಲೀಸ್ ವತಿಯಿಂದ 307.37 ಲೀಟರ್ (ರೂ.112058 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 83.25 ಲೀಟರ್ (ರೂ.37276 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಈವರೆಗೆ ಒಟ್ಟು 28 ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.
ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕ್ವಾಡ್, 24 ಎಸ್ಎಸ್ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.




