ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು 8 ಅಭ್ಯರ್ಥಿ ಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕಾಂಗ್ರೆಸ್ ಪಕ್ಷದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಯಿಂದ ಜಿ.ಎಸ್.ಗಾಯಿತ್ರಿ, ಬಿ ಎಸ್ ಪಿಯಿಂದ ಹನುಮಂತಪ್ಪ, ಸಮಾಜ ವಿಕಾಸ ಕ್ರಾಂತಿ ಪಕ್ಷದಿಂದ ಕೆ.ಹೆಚ್.ರುದ್ರೇಶ್, ಪಕ್ಷೇತರರಾಗಿ ಸುಭಾನ್ ಖಾನ್, ಟಿ.ಜಬೀನ್ ತಾಜ್, ಸಿ.ಎಂ.ಮಂಜುನಾಥಸ್ವಾಮಿ, ಕೆ.ಜಿ.ಅಜ್ಜಪ್ಪ ಇವರು ನಾಮಪತ್ರ ಸಲ್ಲಿಸಿದ್ದಾರೆ.
ಏ.12 ರಂದು 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದುವರೆಗೆ 12 ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.




