ದಾವಣಗೆರೆ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಮೇ.5 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮತದಾನೋತ್ಸವ ಅಂಗವಾಗಿ ಹಾಟ್ ಏರ್ ಬಲೂನ್ ಸಾಹಸ ಕ್ರೀಡೆ ಹಮ್ಮಿಕೊಳ್ಳಲಾಗಿತ್ತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಮತದಾರ ಜಾಗೃತಿ ಹಾಟ್ ಏರ್ ಬಲೂನ್‍ಗೆ ಚಾಲನೆ ನೀಡಿದರು. ಚುನಾವಣಾ ಲೆಕ್ಕ ವೀಕ್ಷಕರಾದ ಪ್ರತಿಭಾ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಪಶುಪಾಲನೆ ಇಲಾಖೆ ಉಪ ನಿರ್ದೇಶಕರು ಡಾ.ಚಂದ್ರಶೇಖರ್ ಸುಂಕದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ. ಆರ್. ಜಯಲಕ್ಷ್ಮಿ ಬಾಯಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.




