ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದೆ. ಬಾಗಲಕೋಟೆ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ್ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಿದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೊಹಮದ್ ನಲಪಾಡ್ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ವೀಣಾ ಕಾಶಪ್ಪನವರ್ ಗೆ ಅವಕಾಶ ನೀಡಬೇಕು. ತಪ್ಪಿದಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಅವರ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಾಗಲಕೋಟೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಮತದಾನ ಬಹಿಷ್ಕಾರ ಮಾಡುವುದಾಗಿ ಬೆದರಿಕೆ ಒಡ್ಡಿದರು. ಸಿದ್ದರಾಮಯ್ಯ ನಿವಾಸದ ಬಳಿ ಸೇರಿದ ಸಾವಿರಾರು ಕಾರ್ಯಕರ್ತರು ವೀಣಾ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ಬಾಗಲಕೋಟೆ ಕ್ಷೇತ್ರದ ಟಿಕೆಟ್ ಅನ್ನು ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಗೆ ಯಾವುದೇ ಕಾರಣಕ್ಕೂ ನೀಡಬಾರದು. ಪಂಚಮಸಾಲಿ ಸಮುದಾಯದ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ವೀಣಾ ಕಾಶಪ್ಪನವರ್ ಬೆಂಬಲಿಗರು ಒತ್ತಾಯಿಸಿದರು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ವೀಣಾ ಕಾಶಪ್ಪನವರ್ ಬೆಂಬಲಿಗರು, ಈ ಬಾರಿ ಬಾಗಲಕೋಟೆ ಕ್ಷೇತ್ರದಿಂದ ವೀಣಾ ಸೂಕ್ತ ಗೆಲುವಿನ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರು ಗೆಲ್ಲಿಸಿಕೊಂಡು ಬರಲಿದ್ದೇವೆ. ಒಂದು ವೇಳೆ ಕಾರ್ಯಕರ್ತರ ಮಾತು ಕೇಳದೆ, ನಾಯಕರ ಮಾತು ಕೇಳಿ ಬೇರೆಯವರಿಗೆ ಟಿಕೆಟ್ ಕೊಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವೀಣಾ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಪ್ರವಾಸ ಮಾಡಿ 5 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅವರು ಕ್ಷೇತ್ರದ ಮಹಿಳೆಯರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇನ್ನು ವೀಣಾ ಅವರನ್ನು ಬಿಟ್ಟು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ನಮ್ಮ ಕಾರ್ಯಕರ್ತರು ನಿರ್ಣಯ ಕೈಗೊಂಡಿದ್ದೇವೆ ಎಂದರು.
ಇದೇ ವೇಳೆ ಮಾತನಾಡಿದ ವೀಣಾ ಕಾಶಪ್ಪನವರ್, ಕಳೆದ ಐದು ವರ್ಷಗಳಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿದ್ದೇನೆ. ಬಾಗಲಕೋಟೆಯ ಮನೆ ಮಗಳಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದೇನೆ ಎಂದರು.
ಕಳೆದ ಬಾರಿ ನನಗೆ ಕೊನೆ ಕ್ಷಣದಲ್ಲಿ ಟಿಕೆಟ್ ನೀಡಿದ್ದರು. ಆದರೂ ನಾನು ಐದು ಲಕ್ಷ ಮತಗಳನ್ನ ಪಡೆದಿದ್ದೇನೆ. ಏಕೆ ಇನ್ನೂ ಟಿಕೆಟ್ ಘೊಷಿಸಿಲ್ಲ ಎನ್ನುವುದನ್ನು ನಮ್ಮ ನಾಯಕರೇ ಉತ್ತರಿಸಬೇಕು. ನನ್ನ ಪತಿ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ನನಗೆ ಬೆಂಬಲ ಸೂಚಿಸಿದ್ದಾರೆ. ನನ್ನ ಪತಿ ಬೆಂಬಲದಿಂದಲೇ ನಾನು ಇಲ್ಲಿ ಇದ್ದೇನೆ ಎಂದರು.
ಕಚೇರಿ ಮುಂದೆ ಧರಣಿ ನಡೆಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್, ತಮಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಕ್ಷೇತ್ರದಲ್ಲಿ ಹಲವು ಸುತ್ತಿನ ಪ್ರವಾಸ ನಡೆಸಿದ್ದು ಮತದಾರರು ತಮ್ಮ ಪರವಾಗಿ ಒಲವು ಹೊಂದಿದ್ದಾರೆ. ಹೀಗಾಗಿ ಪಕ್ಷ ಟಿಕೆಟ್ ನೀಡಿದರೆ ಆಯ್ಕೆಯಾಗಿ ಬರುತ್ತೇನೆ ಎಂದರು.
ವಿಶೇಷವೆಂದರೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ ಎಂಬ ವಾದವನ್ನು ಸ್ವತಃ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಬಿಜೆಪಿ, ಜೆಡಿಎಸ್ ನಾಯಕರು ಹಾಗೂ ಮಾಧ್ಯಮದವರು ಹೇಳುತ್ತಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಪೈಪೋಟಿ ಏರ್ಪಟ್ಟಿದೆ.




