ಬೆಂಗಳೂರು: ನಿಗದಿತ ಆದಾಯ ಮೂಲ ಮೀರಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಸಂಪಾದಿಸಿರುವ ಆರೋಪಕ್ಕೆ ಸಿಲುಕಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಮೈಚಳಿ ಬಿಡಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬೆಂಗಳೂರು, ಹಾಸನ, ಕಲಬುರಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ 12 ಮಂದಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆ ಎಳೆದಿದ್ದಾರೆ ಲೋಕಾಯುಕ್ತರ ಬಲೆಗೆ ಬಿದ್ದ ಈ ಅಧಿಕಾರಿಗಳ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಮತ್ತು ಜಿಲ್ಲಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಿಗದಿತ ಆದಾಯ ಮೂಲ ಮೀರಿ ಕೋಟ್ಯಾಂತರ ಅಕ್ರಮ ಆಸ್ತಿ ಸಂಗ್ರಹಣೆ ಆರೋಪದಡಿ ರಾಜ್ಯಾದ್ಯಂತ 12 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ.
ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ದಾಳಿ: ದಾವಣಗೆರೆ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಇಬ್ಬರು ಅಧಿಕಾರಿಗಳಿಗೆ ಸೇರಿದ ಹತ್ತು ಕಡೆ ಇರುವ ಆಸ್ತಿ-ಪಾಸ್ತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.
ಕೆಆರ್ ಐಡಿಎಲ್ ಸಹಾಯಕ ಅಭಿಯಂತರ ಜಗದೀಶ್ ನಾಯ್ಕ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಸ್ ಡಿಎ ನಡುವಿನಮನೆ ಎಂಬ ಇಬ್ಬರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸುತ್ತಿದ್ದಾರೆ.ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದ ತಂಡದಿಂದ ಈ ದಾಳಿ ನಡೆಸಲಾಗಿದೆ.
ಎಸ್ ಡಿ ಎ ಮೇಲೆ ದಾಳಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಎಸ್ ಡಿಎ ನಡುವಿನಮನೆ ಮೇಲೆ ದಾಳಿ ಮಾಡಿ ಇಲ್ಲಿನ ಸರಸ್ವತಿ ನಗರದಲ್ಲಿರುವ ಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಲೋಕಾಯುಕ್ತ ಇನ್ಸಪೆಕ್ಟರ್ ಸರಳ ಅವರು ಬೆಳಗ್ಗೆಯಿಂದಲೇ ನಡುವಿನಮನೆ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಲೋಕಾಯುಕ್ತ ಎಸ್ ಪಿ ಕೌಲಾಪುರೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇಲ್ಲಿನ ಕೆಆರ್ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ್ ಅವರ ಮನೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆಗಳಲ್ಲಿ ಜಗದೀಶ್ ನಾಯ್ಕ್ ಗೆ ಸೇರಿದ ಮೂರು ಮನೆಗಳ ಮೇಲೆ ದಾಳಿ ನಡೆದಿದೆ. ದಾವಣಗೆರೆಯಲ್ಲಿ ಎಪಿಎಂಸಿ ಬಳಿ ಇರುವ ಕಚೇರಿ ಮೇಲೂ ದಾಳಿ ಮಾಡಲಾಗಿದೆ.
ಕೃಷಿ ಅಧಿಕಾರಿಗೆ ಬಿಸಿ: ಅಕ್ರಮ ಆಸ್ತಿಗಳಿಕೆ ಹಿನ್ನಲೆಯಲ್ಲಿ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಅವರ ಕಚೇರಿ ನಿವಾಸ ಸೇರಿ ಏಕಕಾಲಕ್ಕೆ ಜಿಲ್ಲೆಯಾದ್ಯಂತ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಕೈಗೊಂಡಿದ್ದಾರೆ.
ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ ಮಾಡಲಾಗಿದೆ.
ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.
ಎಲ್ಲೆಲ್ಲಿ ದಾಳಿ?
ಹಾಸನ – ಜ್ಯೋತಿ ಮೇರಿ, ಪ್ರಥಮ ದರ್ಜೆ ಸಹಾಯಕಿ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕಲಬುರಗಿ – ಧೂಳಪ್ಪ, ಸಹಾಯಕ ನಿರ್ದೇಶಕ – ಕೃಷಿ ಇಲಾಖೆ
ಚಿತ್ರದುರ್ಗ – ಚಂದ್ರಕುಮಾರ್, ಸಹಾಯಕ ನಿರ್ದೇಶಕ – ಕೃಷಿ ಇಲಾಖೆ
ಉಡುಪಿ – ಲಕ್ಷ್ಮೀನಾರಾಯಣ್ ಪಿ ನಾಯಕ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ
ಬೆಂಗಳೂರು – ಮಂಜುನಾಥ್ ಜಿ, ವೈದ್ಯಾಧಿಕಾರಿ – ಮಲ್ಲಸಂದ್ರ ಹೆರಿಗೆ ಆಸ್ಪತ್ರೆ
ಬೆಂಗಳೂರು – ವಿ ಸುಮಂಗಲ, ನಿರ್ದೇಶಕಿ – ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ
ಬೆಂಗಳೂರು – ಎನ್.ಕೆ ಗಂಗಮರಿ ಗೌಡ, ಸರ್ವೇಯರ್ – ವಿಶೇಷ ಭೂ ಸ್ವಾಧೀನ ಅಧಿಕಾರಿ – ಬಿಎಂಆರ್‌ಸಿಎಲ್
ದಾವಣಗೆರೆ – ಜಗದೀಶ್ ನಾಯಕ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ – ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ
ದಾವಣಗೆರೆ – ಬಿ.ಎಸ್ ನಡುವಿನಮನಿ, ಜ್ಯೂನಿಯರ್ ಇಂಜಿನಿಯರ್ – ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಹಾವೇರಿ – ಅಶೋಕ್, ರೆವಿನ್ಯೂ ಇನ್ಸ್‌ಪೆಕ್ಟರ್ – ರಾಣೆಬೆನ್ನೂರು ತಾಲ್ಲೂಕು
ಹಾವೇರಿ – ಬಸವೇಶ್, ಇನ್‌ಚಾರ್ಜ್ ಎಕ್ಸಿಕ್ಯುಟಿವ್ ಆಫೀಸರ್ – ತಾಲ್ಲೂಕು ಪಂಚಾಯತ್ ಸವಣೂರು
ಬಾಗಲಕೋಟೆ – ಚೇತನ್, ಜ್ಯೂನಿಯರ್ ಇಂಜಿನಿಯರ್ – ಅಸಿಸ್ಟೆಂಟ್ ಇಂಜಿನಿಯರ್ (ಆಲಮಟ್ಟಿ ಬಲದಂಡೆ ಕಾಲುವೆ)




