ಲೋಕಾಯುಕ್ತ ತನಿಖೆ ವಿಳಂಬ: ಸಿದ್ದರಾಮಯ್ಯ ಅಸಮಾಧಾನ

2 years ago

ಬೆಂಗಳೂರು: ಭ್ರಷ್ಟಾಚಾರ ಆರೋಪ ಕುರಿತ ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಸಿಎಂ, ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಮಾಹಿತಿ ಪಡೆದ ಅವರು, ಈ ಕುರಿತು ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ಹೋಗಬಾರದು. ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

Leave a Reply