ಬಳ್ಳಾರಿ: ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 5 ರವರೆಗೆ ನಡೆದ 5ನೇ ಆವೃತ್ತಿಯ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಲೋಕೇಶ್ ರಾಥೋಡ್ (ಜಿ.ಬಿ.ಆರ್. ಕಾಲೇಜು ಹೂವಿನಹಡಗಲಿ) ಡೆಕಾಥ್ಲಾನ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಇವರ ಸಾಧನೆಗೆ ಮತ್ತು ತಂಡದ ವ್ಯವಸ್ಥಾಪಕ ಮಲ್ಲಿಕಾರ್ಜುನ.ವೈ ಮತ್ತು ತರಬೇತುದಾರ ಬಡೇಸಾಬ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿ, ಕುಲಸಚಿವ (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಶುಭ ಕೋರಿದ್ದಾರೆ.




