2024ರ ಲೋಕಸಭಾ ಚುನಾವಣೆ ಸೋಲಿನ ಪರಾಮರ್ಶೆ ಮಾಡಲು ಕೆಪಿಸಿಸಿ ಸತ್ಯಶೋಧನ ಸಮಿತಿ ರಚನೆ
ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಾಮರ್ಶೆ ಮಾಡಲು ಕೆಪಿಸಿಸಿ ಸತ್ಯಶೋಧನ ಸಮಿತಿ ರಚನೆ ಮಾಡಲು ತೀರ್ಮಾನಿಸಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಲೋಕಸಭೆ ಚುನಾವಣೆ ಸೋಲಿನ ಆತ್ಮಾವಲೋಕನ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಲೋಕಸಭಾ ಚುನಾವಣೆಯ ಫಲಿತಾಂಶ ಸಮಾಧಾನಕರವಾಗಿಲ್ಲ. 15ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎನ್ನುವ ನಿರೀಕ್ಷೆ ಸುಳ್ಳಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಹೊರತಾಗಿ ಮಿಕ್ಕ ಕಡೆ ಪಕ್ಷಕ್ಕೆ ಏಕೆ ಸೋಲಾಯಿತು ಎಂದು ಪರಾಮರ್ಶನೆಗೆ ಒಳಪಡಿಸಲು ಸತ್ಯಶೋಧನ ಸಮಿತಿ ರಚಿಸಲಾಗುವುದು. ಈ ಸಮಿತಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದರು.
ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹಾಗೂ ಆರು ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಇಬ್ಬರು ಗೆದ್ದಿದ್ದಾರೆ. ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಮಾತ್ರ ಗಳಿಸುತ್ತದೆ ಎಂದು ಮಾಧ್ಯಮಗಳು ಹೇಳಿದ್ದವು. ಆದರೆ ಎಲ್ಲವೂ ತಲೆಕೆಳಗಾಗಿ ನಾವು 9 ಸ್ಥಾನಗಳನ್ನು ಗೆದ್ದೆವು. ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಇನ್ನು ನಾಲ್ಕೈದು ಸ್ಥಾನಗಳನ್ನು ಗೆಲ್ಲಬಹುದಾಗಿತ್ತು. ಎಲ್ಲಿ ಎಡವಲಾಯಿತು. ಎಲ್ಲಾ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತಂದರು ಏಕೆ ಜನ ನಮ್ಮ ಕೈ ಹಿಡಿಯಲಿಲ್ಲ ಎಂದು ಚಿಂತನೆ ಮಾಡಲಾಗುವುದು ಎಂದರು.
ಕರ್ನಾಟಕದಲ್ಲಿ ಮೋದಿ ಅಲೆ ಇರಲಿಲ್ಲ. ನಮ್ಮಲ್ಲಿ ಬಿಜೆಪಿಯವರಂತೆ ಒಳಜಗಳ ಇರಲಿಲ್ಲ. ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರು. ಆದರೂ ಏಕೆ ಸೋಲಾಯಿತು ಎಂದು ಸತ್ಯಶೋಧನೆ ಮಾಡಲಾಗುವುದು. ಆನಂತರ ವಿಭಾಗವಾರು ನಾಲ್ಕು ಸಭೆಗಳನ್ನು ನನ್ನ ಮತ್ತು ಸಿಎಂ ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದರು.
ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿ ರಾಜ್ಯಗಳಿಗೆ ಎಐಸಿಸಿ ಸತ್ಯಶೋಧನ ಸಮಿತಿಯ ಭೇಟಿ ನೀಡಲಿದೆ. ಆ ಸಮಿತಿಯು ಪ್ರತಿ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ರಾಜ್ಯದ ವರದಿಯನ್ನು ಸಲ್ಲಿಸಲಾಗುವುದು ಎಂದರು.
ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಇದರಿಂದ ಉತ್ತಮ ಸ್ಥಾನಗಳನ್ನು ಗೆಲ್ಲಲಾಯಿತು. ಇದೇ ಸಂಪ್ರದಾಯವನ್ನು ಮುಂದಿನ ದಿನಗಳಲ್ಲಿ ಮುಂದುವರೆಸಲಾಗುವುದು ಎಂದರು.
ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಉಪಚುನಾವಣೆಯನ್ನು ಎದುರಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಶಿಗ್ಗಾವಿ ಕ್ಷೇತ್ರದ ವರದಿ ನೀಡಲಾಗಿದೆ. ಜುಲೈ 3 ರ ನಂತರ ಸಂಡೂರಿನ ವರದಿ ಸಲ್ಲಿಸುತ್ತಾರೆ. ಸಚಿವರಾದ ಚಲುವರಾಯಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಕುರಿತು ವರದಿ ನೀಡುತ್ತಾರೆ ಎಂದರು.




