ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದಿತ್ತು. ಆದರೆ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ 136 ಜನ ಕಳ್ಳರು ಇದ್ದಾರೆ. ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ. ಅದಕ್ಕಾಗಿ ಬೆಲೆ ಏರಿಕೆ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಜೆಟ್ ನಲ್ಲಿ ಯಾವುದೇ ತೆರಿಗೆ ತೋರಿಸದೆ ಇದೀಗ ಬೆಲೆ ಏರಿಕೆ ಮಾಡಲಾಗ್ತಿದೆ. ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಆಗ್ತಿದೆ ಎಂದು ಆರೋಪಿಸಿದರು.
ಸಚಿವರು ಅಂಗಡಿ ತೆರೆದಿದ್ದಾರೆ. 40% ಆರೋಪಕ್ಕೆ ಸಾಕ್ಷಿ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ನಲ್ಲಿ 15,000 ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗಷ್ಟೇ ಸಿಎಂ. ಸರ್ಕಾರದ ಗಾಲಿ ಕುರ್ಚಿಯಲ್ಲಿದೆ ಎಂದರು.
ಕಾಂಗ್ರೆಸ್ ಪಕ್ಷ ತನ್ನ ಓಲೈಕೆ ರಾಜಕಾರಣಕ್ಕಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಯಾವ ಜಮೀನನ್ನು ಬೇಕಾದರೂ ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳುವ ಅವಕಾಶ ಕೊಟ್ಟಿತ್ತು. ಇದರಿಂದ ರೈತರ ಜಮೀನು, ದೇವಸ್ಥಾನ, ಮಠ-ಮಂದಿರಗಳ ಆಸ್ತಿ ಎಲ್ಲ ಕಬಳಿಕೆ ಆಗುತ್ತಿತ್ತು. ಈಗ ಎನ್ ಡಿಎ ಸರ್ಕಾರ ತಂದಿರುವ ತಿದ್ದುಪಡಿಯಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮಠ ಮಾನ್ಯಗಳ ಜಮೀನು ಸುರಕ್ಷಿತವಾಗಿ ಉಳಿಯಲಿದೆ. ಇದಕ್ಕಾಗಿ ಪ್ರಧಾನಮಂತ್ರಿಗಳಿಗೆ, ಕೇಂದ್ರ ಗೃಹ ಸಚಿವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಎಂದರು.




