ಬೆಂಗಳೂರು: ಆದಾಯ ತೆರಿಗೆ ಹಾಗೂ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಾಲ್ವರು ಪ್ರೊಪೆಸರ್ ಒಬ್ಬರ ಮನೆಗೆ ಪರಿಶೀಲನೆ ನಡೆಸುವ ನೆಪದಲ್ಲಿ ನುಗ್ಗಿದ ಅಪರಿಚಿತರು 1.50 ಕೋಟಿ ನಗದು, 50 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಸುಳಿವನ್ನು ಯಲಹಂಕ ಪೊಲೀಸರ ವಿಶೇಷ ತಂಡಗಳು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಕಳೆದ ಸೆ.16 ರಂದು ಮಧ್ಯಾಹ್ನ ಸಿಂಧಿ ಕಾಲೇಜು ಪ್ರೋಪೆಸರ್ ಗಿರಿರಾಜ್ ಅವರ ಯಲಹಂಕದ ಮನೆಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ನಕಲಿ ನಂಬರ್ ಪ್ಲೇಟ್ ಹಾಕಿದ್ದ ಕಾರಿನಲ್ಲಿ ಸೂಟು ಬೂಟು ಹಾಕಿಕೊಂಡು ಬಂದಿದ್ದಾರೆ.
ಮನೆಯಲ್ಲಿದ್ದ ಪತ್ನಿ ಹಾಗೂ ತಂದೆ ತಾಯಿಗೆ ನಾವು ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಪರಿಶೀಲನೆ ಮಾಡುವ ನೆಪಮಾಡಿ ಬಳಿಕ ನಿಮ್ಮ ಮನೆಯಲ್ಲಿ ಹಣ ಇದೆ ಎಂದು ಮನೆಯವರನ್ನು ಕೇಳಿದ್ದಾರೆ. ಹಣ ಎಲ್ಲಿದೆ ಎಂದು ಪ್ರಶ್ನಿಸಿ ಗದರಿದಾಗ ಅಡುಗೆ ಮನೆಯಲ್ಲಿಟ್ಟಿದ್ದ ಹಣವನ್ನು ಖದೀಮರು ತೆಗೆದುಕೊಂಡಿದ್ದರು.
ಮನೆಯವರ ಬಳಿ ಗಿರಿರಾಜು ಎಲ್ಲಿದ್ದಾರೆ ಎಂದು ಕೇಳಿದ್ದರು. ಅವರು ಇಲ್ಲ ಎಂದಾಗ ಮನೆಯಲ್ಲಿದ್ದ 1.50 ಕೋಟಿ ಹಣವಿದ್ದ ಬ್ಯಾಗ್, 50 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕೆಲ ಸಮಯದ ಬಳಿಕ ಕೆಲಸ ಮುಗಿಸಿಕೊಂಡು ಕಾಲೇಜಿನಿಂದ ಗಿರಿರಾಜ್ ಅವರು ಮನೆಗೆ ಬಂದಾಗ ವಿಷಯ ತಿಳಿದು ವಂಚನೆಗೊಳಗಾಗಿರುವುದು ಗೊತ್ತಾಗಿ ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ.
ಜಮೀನು ಖರೀದಿಸಲು 1.50 ಕೋಟಿ ನಗದನ್ನು ಮನೆಗೆ ತಂದಿಟ್ಟಿಕೊಂಡಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದು,ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ಸಜೀತ್ ಅವರು ರಚಿಸಿದ ವಿಶೇಷ ತಂಡಗಳು ಸಿಸಿ ಟಿವಿ ಕ್ಯಾಮರಾಗಳ ದೃಶ್ಯವನ್ನು ತಪಾಸಣೆ ನಡೆಸಿ ದುಷ್ಕರ್ಮಿಗಳ ಸುಳಿವು ಪತ್ತೆಹಚ್ಚಿ ನೆರೆಯ ಆಂಧ್ರಪ್ರದೇಶಕ್ಕೆ ತೆರಳಿ ಬಂಧನ ಕಾರ್ಯಾಚರಣೆ ಕೈಗೊಂಡಿದ್ದಾರೆ.




