ಬೆಂಗಳೂರು: ಗೋದಾವರಿ-ಕಾವೇರಿ ಜೋಡಣೆ ಮತ್ತು ಮಹದಾಯಿ ಯೋಜನೆಯಲ್ಲಿ ರಾಜ್ಯಕ್ಕೆ ನಷ್ಟವಾಗಿದೆ. ಇದು ರಾಜ್ಯದ ಸಮಸ್ಯೆ. ಇದರಲ್ಲಿ ಜೆಡಿಎಸ್-ಬಿಜೆಪಿ ಸಂಸದರು ಮಾತ್ರವಲ್ಲ, ಕಾಂಗ್ರೆಸ್ನ ಸಂಸದರೂ ಹೋರಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿಗೆ ಸಂಬಂಧಿಸಿದ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿದೆ. ಸಿದ್ದರಾಮಯ್ಯ ಅವರ ಸರ್ಕಾರವೂ ಪ್ರಧಾನಿಗೆ ಪತ್ರ ಬರೆದಿದೆ. ವಿಷಯ ನ್ಯಾಯಾಲಯದಲ್ಲಿ ಇರುವ ಕಾರಣ ಪ್ರಧಾನಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಲ್ಲಿ ರಾಜ್ಯ ಸರ್ಕಾರದ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸಬೇಕು. ಈ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ನಮ್ಮ ಸಹಕಾರವಿದೆ ಎಂದರು.
ನದಿ ಜೋಡಣೆ, ನೀರಾವರಿ ಸೇರಿ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ. ನಾವು ಹೋರಾಡುತ್ತಲೇ ಇದ್ದೇವೆ. ರಾಜ್ಯ ಸರ್ಕಾರದ ಹೋರಾಟಕ್ಕೆ ನಮ್ಮ ಸಹಕಾರವಿದೆ ಎಂದರು.
ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆ ಡಿಪಿಆರ್ ಸಿದ್ಧಪಡಿಸಿದಾಗ, ಕರ್ನಾಟಕಕ್ಕೆ ನೀರು ಹಂಚಿಕೆ ಮಾಡಿರಲಿಲ್ಲ. ನಾನು 2020-2022ರಲ್ಲಿ ಅಂದಿನ ಕೇಂದ್ರ ನೀರಾವರಿ ಸಚಿವರಿಗೆ ಪತ್ರ ಬರೆದಿದ್ದೆ ಎಂದರು.
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸಚಿವರ ಗಮನ ಸೆಳೆದ ನಂತರ, ರಾಜ್ಯಕ್ಕೆ 15.91 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ. ಆದರೆ ಅದನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವೇ ಎಂಬ ಪ್ರಶ್ನೆಯನ್ನು ನಾನು ಸಂಸತ್ತಿನಲ್ಲಿ ಎತ್ತಿದ್ದೇನೆ ಎಂದರು.
ಗೋದಾವರಿಯಿಂದ ಹರಿಸಿದ ನೀರು ರಾಜ್ಯದಲ್ಲಿ ಕಾವೇರಿಗೆ ಎಲ್ಲಿ ಜೋಡಿಸುತ್ತಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿಯೇ ಇಲ್ಲ. ಅದನ್ನು ಸ್ಪಷ್ಟಪಡಿಸಿ ಎಂದು ಕೋರಿದ್ದೇನೆ. ಇದಕ್ಕೆ ಒತ್ತು ನೀಡಿ ಪ್ರಧಾನಿಗೆ ಪತ್ರ ಬರೆಯುತ್ತೇನೆ ಎಂದರು.
ಈ ಯೋಜನೆ ಅಡಿ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಪ್ರಮಾಣದ ಬಗ್ಗೆ ನಿಮಗೆ ತೃಪ್ತಿ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆ ಅಡಿಯಲ್ಲಿ ಕನಿಷ್ಠ 25 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಬೇಕು ಎಂಬುದು ನನ್ನ ಒತ್ತಾಯ. ಇದಕ್ಕಾಗಿ ನಾನು ಹೋರಾಟ ಮಾಡುತ್ತೇನೆ ಎಂದರು.
ಈ ಹೋರಾಟ ಮಾಡುವಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೆ ಮಾತನಾಡಲು ನನಗೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡೇ ಹೋರಾಟ ನಡೆಸುತ್ತೇನೆ ಎಂದರು.




