ದಾವಣಗೆರೆ: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಹಾಗೂ ಕೇಂದ್ರ ಸರ್ಕಾರದ ಜನಗಣತಿಗೆ ಸಾಕಷ್ಟು ವ್ಯತ್ಯಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರ ಸರ್ಕಾರ ಕೇವಲ ಜಾತಿಯ ಜನಸಂಖ್ಯೆಯನ್ನು ಲೆಕ್ಕಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಕೇಂದ್ರಕ್ಕಿಂತ ರಾಜ್ಯದ ಜಾತಿ ಗಣತಿ ಭಿನ್ನ ಎಂದರು.
ಸಾಮಾಜಿಕ ನ್ಯಾಯಕ್ಕೆ ಜಾತಿಗಳ ಸ್ಥಿತಿಗತಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ಇದಕ್ಕೆ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಗೊತ್ತಾಗಬೇಕು. ಇಲ್ಲವಾದರೆ ಸಾಮಾಜಿಕ ನ್ಯಾಯ ನೀಡುವುದು ಕಷ್ಟ ಎಂದರು.
ಕೇಂದ್ರ ಸರ್ಕಾರ 2027ರಿಂದ ಜಾತಿ ಗಣತಿ ಶುರು ಮಾಡುವುದಾಗಿ ಹೇಳಿದೆ. ಕೇಂದ್ರದ ಜಾತಿ ಗಣತಿಗೆ ರಾಜ್ಯ ಸರ್ಕಾರದ ತಕರಾರು ಇಲ್ಲ. ಜಾತಿ ಗಣತಿಯ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವುದಾಗಿ ಕೇಂದ್ರ ಸರ್ಕಾರ ಈವರೆಗೆ ಸ್ಪಷ್ಟಪಡಿಸಿಲ್ಲ ಎಂದರು.
ಎಚ್.ಕಾಂತರಾಜ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರಬಲ ಮತ್ತು ದುರ್ಬಲ ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಈ ಸಮೀಕ್ಷೆ ನಡೆದು 10 ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ-1995ರ ಕಲಂ 11ರ ಪ್ರಕಾರ 10 ವರ್ಷದ ಬಳಿಕ ಹೊಸ ವರದಿ ತರಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ, ಹೊಸ ಜಾತಿ ಗಣತಿಗೆ ನಿರ್ಧರಿಸಲಾಗಿದೆ ಎಂದರು.
ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಕೂಡಲೇ ಆರಂಭಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಲಾಗಿದೆ ಎಂದರು.




