ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ

3 years ago

ಬೆಂಗಳೂರು: ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಹೊತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮತ್ತೆ ಬಂಧನದ ಬೀತಿ ಎದುರಾಗಿದೆ.

ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಲೋಕಾಯುಕ್ತ‌ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಪ್ರಕರಣದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಸುಪ್ರೀಂಕೋರ್ಟ್ ನೋಟೀಸ್: ಪುತ್ರನ‌ ಲಂಚ ಸ್ವೀಕಾರ ಕೋಟ್ಯಾಂತರ ಹಣ ಪತ್ತೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.

Leave a Reply