ಮಂಡ್ಯ: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲುತೂರಾಟ ಪೂರ್ವನಿಯೋಜಿತ ಎನ್ನುವ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪ್ರಕರಣದ ಸಂಬಂಧ ಇಲ್ಲಿಯವರೆಗೆ 22 ಜನರನ್ನು ಬಂಧಿಸಿ ಹಲವರನ್ನು ವಿಚಾರಣೆ ನಡೆಸಲಾಗಿದೆ. ಪಟ್ಟಣದಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಿ ನಿಗಾ ವಹಿಸಲಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಮಸೀದಿ ಕಡೆಯಿಂದಲೇ ಕಲ್ಲು ತೂರಾಟ ನಡೆದಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಲ್ಲು ತೂರಾಟ ಮಾಡಿದ್ದು ಸ್ಪಷ್ಟವಾಗಿದೆ. ಆದರೆ, ಕಲ್ಲುತೂರಾಟದ ಘಟನೆ ನಡೆದ ಸಮಯದಲ್ಲಿ ಬೀದಿ ದೀಪಗಳನ್ನು ಆಫ್ ಮಾಡಲಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಘಟನೆ ಪೂರ್ವನಿಯೋಜಿತವೇ ಎಂಬ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದರು.
ಪಟ್ಟಣದಲ್ಲಿ 7 ಎಸ್ಪಿ, ಮೂವರು ಎಎಸ್ಪಿ, 600 ಪೊಲೀಸರು, ಎರಡು ಕಂಪನಿ ಆರ್‌ಎಎಫ್ ನಿಯೋಜಿಸಿ ಹೆಚ್ಚಿನ ಪೊಲೀಸ್ ಬಂದ್ ಬಸ್ತ್ ಕೈಗೊಳ್ಳಲಾಗಿದೆ. ರಾತ್ರಿ ವೇಳೆ ಬಂದ್ ಬಸ್ತ್ ಮಾಡಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಗಲಾಟೆ ವೇಳೆ ಚನ್ನಪಟ್ಟಣದ ಮೂವರಿದ್ದಾರೆ. ಅವರೂ ಊಟಕ್ಕೆ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಲಾಗುತ್ತಿದೆ ಎಂದರು.




