ಬಹು ವರ್ಷಗಳ ಕನಸಿನ ಹಸಿರುಮಕ್ಕಿಯ ಬ್ರಿಡ್ಜ್ ನನಸು
ಶಿವಮೊಗ್ಗ: ಮಲೆನಾಡಿನಿಂದ ಕರಾವಳಿ ಭಾಗಕ್ಕೆ ಸಂಪರ್ಕಿಸುವ ಸಾಗರ ತಾಲ್ಲೂಕಿನ ಹಸಿರುಮಕ್ಕಿಯ ಶರಾವತಿ ಮುಳುಗಡೆ ಹಿನ್ನೀರ ಕಡವಿನಲ್ಲಿ ನಿರ್ಮಾಣ ಹಂತದಲ್ಲಿರುವ “ಹಸಿರುಮಕ್ಕಿ ಸೇತುವೆ” ಕಾಮಗಾರಿ ಪ್ರದೇಶಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದರು. ಇದೇ ವೇಳೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಹಸಿರು ಮಕ್ಕಿ ಸೇತುವೆ ಸುಮಾರು 1155 ಮೀ. ಉದ್ದ ಹಾಗೂ 8.5 ಮೀ. ಅಗಲದಾಗಿದ್ದು, ಸನ್ಮಾನ್ಯ ಮಾಜಿ ಸಭಾಪತಿಗಳಾದ ಕಾಗೋಡು ತಿಮ್ಮಪ್ಪನವರ ಕನಸು ಹಾಗೂ ಪರಿಶ್ರಮದ ಫಲದಿಂದಾಗಿ ಸೇತುವೆ ಕಾಮಗಾರಿಯನ್ನು ಮಂಜೂರು ಮಾಡಿಸಿದ್ದರು.
ಹಸಿರುಮಕ್ಕಿ ಸೇತುವೆ ಸಂಚಾರಕ್ಕೆ ಮುಕ್ತವಾದರೆ ಸಾಗರ ತಾಲೂಕಿನಿಂದ ಉಡುಪಿ, ಮಂಗಳೂರು, ಕುಂದಾಪುರ, ಭಟ್ಕಳ ಹಾಗೂ ಕೊಲ್ಲೂರು ಕ್ಷೇತ್ರಗಳಿಗೆ ಕಡಿಮೆ ಅವಧಿಯಲ್ಲಿಯೇ ತಲುಪಲು ಸಹಕಾರಿಯಾಗಲಿದೆ.
ಈ ವೇಳೆ ಜನಪ್ರತಿನಿಧಿಗಳು, ಪಕ್ಷದ ಮುಖಂಡರುಗಳು, ಮಹಿಳಾ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.




