ರಾಜೀವ್ ಗಾಂಧಿ ಹೆಸರಿನಲ್ಲಿ ಐಟಿ ಪುರಸ್ಕಾರ ಘೋಷಣೆ

5 years ago

ಮುಂಬೈ: ಸಮಾಜಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುವ ಮಾಹಿತಿ ತಂತ್ರಜ್ಞಾನ ಸಂಘಟನೆಗಳನ್ನು ಸನ್ಮಾನಿಸುವ ಪ್ರಶಸ್ತಿಗೆ ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿಯವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಈ ಕುರಿತು ಸರ್ಕಾರದ ಆದೇಶ ಹೊರಡಿಸಿದ್ದು, 1984ರಿಂದ 1989ರವರೆಗೆ ದೇಶದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅವಧಿಯಲ್ಲಿಯೇ ದೇಶದ ಮಾಹಿತಿ ತಂತ್ರಜ್ಞಾ ಕ್ಷೇತ್ರವು ಬೆಳವಣಿಗೆ ಹೊಂದಿತು. ಅವರು ಐಟಿ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ರಾಜೀವ್ ಗಾಂಧಿ ಹೆಸರಿನಲ್ಲಿ ಪ್ರಶಸ್ತಿ ನೀಡಲಿದೆ ಎಂದು ಹೇಳಿದೆ.

ಭಾರತದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನದ ಹೆಸರಿನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ತೆಗೆದುಹಾಕಿತ್ತು. ಇದೀಗ ಶಿವಸೇನೆ, ಎನ್.ಸಿ.ಪಿ, ಕಾಂಗ್ರೆಸ್ ಮೈತ್ರಿ ಸರ್ಕಾರ ಹೊಸದಾಗಿ ಪ್ರಶಸ್ತಿ ಘೋಷಿಸಿದೆ.

Leave a Reply