ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕರ್ನಾಟಕದಲ್ಲಿನ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರಿಗೆ ತಿರುಗೇಟು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದಾರೆ.
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ ಎಂದರು.
ಚುನಾವಣೆ ಮುಗಿದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು, ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್, ಎನ್ ಸಿ ಪಿ ಮತ್ತು ಶಿವಸೇನಾ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದರು.
ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ. ಈ ಕಾರಣಕ್ಕೆ ಅವರು ಹೆದರಿದ್ದಾರೆ ಎಂದರು.
ಕರ್ನಾಟಕದಲ್ಲಿ ಶಿಂಧೆ ತರದವರು ತರದವರು ಯಾರು ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ ಎಂದರು.




