ಬೆಂಗಳೂರು: ಧರ್ಮಸ್ಥಳ ಪ್ರಕರಣದ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಚಲನವಲನ, ಚಟುವಟಿಕೆಗಳು, ಸಂಪರ್ಕ ಜಾಲಗಳು, ಹಣಕಾಸಿನ ಮೂಲದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ದಾಖಲಾದ ದೂರಿನ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಎಸ್ ಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ.ಜಯಂತ್ ಹಾಗೂ ಎಂ.ಡಿ.ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ದೂರು ದಾಖಲಾಗಿತ್ತು.
ದೂರುದಾರರಾದ ಧರ್ಮಸ್ಥಳದ ಭಕ್ತರಾದ ಬೆಂಗಳೂರು ನಿವಾಸಿ ತೇಜಸ್ ಎ.ಗೌಡ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ನಿವಾಸಿ ಭಾಸ್ಕರ್ ಬಡೆಕೊಟ್ಟು, ಧರ್ಮಸ್ಥಳ ನಿವಾಸಿಗಳಾದ ಸುರೇಂದ್ರ ಪ್ರಭು ಹಾಗೂ ಧನಕೀರ್ತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರ ನ್ಯಾಯಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ.ಜಯಂತ್ ಹಾಗೂ ಎಂ.ಡಿ.ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿದ್ದರು.
ಈ ಸಂಬಂಧ, ಎಸ್ಐಟಿ, ರಾಜ್ಯ ಸರ್ಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಸ್ಐಟಿ, ಆದಾಯ ತೆರಿಗೆ ಮಂಗಳೂರು ಕೇಂದ್ರ ವಲಯ ಅಧಿಕಾರಿ, ಜಾರಿ ನಿರ್ದೇಶನಾಲಯಕ್ಕೆ ಅರ್ಜಿದಾರರು 2025ರ ಆ.20, ಸೆ.5,8 ಮತ್ತು 9ರಂದು ಮನವಿ ಮತ್ತು ದೂರು ಸಲ್ಲಿಸಿದ್ಧಾರೆ. ಆದರೆ, ಅವುಗಳನ್ನು ಪರಿಗಣಿಸಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸರ್ಕಾರದ ಪರ ವಕೀಲರು, ಅರ್ಜಿದಾರರ ದೂರು ಆಧರಿಸಿ ಕೈಗೊಂಡ ಕ್ರಮಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಮಾಹಿತಿ ಪಡೆದು ತಿಳಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಲಾಗುವುದು ಎಂದರು.




