ಬೆಂಗಳೂರು: ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ವಿಚಾರ ಆಯೋಗದಲ್ಲೇ ದೊಡ್ಡ ಬಿಕ್ಕಟ್ಟು ಸೃಷ್ಟಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸೋಮವಾರದಿಂದ ಆಯೋಗ ಮನೆಮನೆ ಸಮೀಕ್ಷೆ ನಡೆಸಲು ಮುಂದಾಗಿರುವ ಬೆನ್ನಲ್ಲೇ ಅದು ಪ್ರಕಟಿಸಿರುವ ಜಾತಿಗಳ ಪಟ್ಟಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅಪಸ್ವರ ಕೇಳಿ ಬಂದಿದ್ದು, ಸಮೀಕ್ಷೆ ಮುಂದೂಡುವಂತೆ ಒತ್ತಡ ಹೇರಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಆಯೋಗದ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವು ಸದಸ್ಯರು ಆಯೋಗದ ಅಧ್ಯಕ್ಷರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ತಾವು ಸಮೀಕ್ಷೆಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.
ಜಾತಿ ಗಣತಿ ಸಮೀಕ್ಷೆ ನಡೆಸಲು ಮುಂದಾಗಿರುವ ಹಿಂದುಳಿದ ವರ್ಗಗಳ ಆಯೋಗ ಅನಗತ್ಯ ಗೊಂದಲ ಸೃಷ್ಟಿಸಿದೆ. ಹೆಚ್ಚುವರಿ ಜಾತಿಗಳನ್ನು ಸೇರ್ಪಡೆ ಮಾಡಲಾಗಿದೆ. ಹಿಂದೂ ಜಾತಿಗಳ ಮುಂದೆ ಕಿಶ್ಚಿಯನ್ ಸೇರ್ಪಡೆ ಮಾಡುವ ಅಗತ್ಯ ಏನಿದೆ? ಎಂಬ ಪ್ರಶ್ನೆಯನ್ನು ಕೆಲವು ಸದಸ್ಯರು ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆಯೋಗದ ಅಧ್ಯಕ್ಷರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಸದಸ್ಯರ ಸಲಹೆಗಳನ್ನು ಪರಿಗಣಿಸುತ್ತಿಲ್ಲ ಎಂಬ ಆಕ್ಷೇಪ ಕೆಲವು ಸದಸ್ಯರಿಗೆ ಇದೆ. ಈ ನಿಟ್ಟಿನಲ್ಲಿ ಸದಸ್ಯರೊಬ್ಬರು ಪತ್ರದ ಮೂಲಕ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.




