ಕೊಡಿಗೇಹಳ್ಳಿ ಶಾಲೆಯಲ್ಲಿ ಅತ್ಯಾಧುನಿಕ 26 ಕೊಠಡಿ ಉದ್ಘಾಟನೆ
ಕಳೆದ 15 ವರ್ಷದಲ್ಲಿ 43 ಶಾಲಾ ಕೊಠಡಿಗಳ ಉದ್ಘಾಟಣೆ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 70 ಕೋಟಿ ಯೋಜನೆಯೂ ಘೋಷಣೆ
ಬ್ಯಾಟರಾಯನಪುರದಲ್ಲಿ ಮುಂದುವರೆದ ಸರ್ಕಾರಿ ಶಾಲೆಗಳ ಮೇಲ್ದರ್ಜೆ ಅಭಿಯಾನ
ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಭಾಗಿ
ಬೆಂಗಳೂರು: ದುಡಿಯುವ ವರ್ಗದ ಬಡ-ಮಧ್ಯಮ ಕುಟುಂಬದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಲು, ಸ್ವಂತ ಕಾಲಿನಲ್ಲಿ ನಿಲ್ಲುವಂತೆ ಮಾರ್ಗದರ್ಶನ ಮಾಡುವುದು ದೇವರ ಪೂಜೆಗಿಂತಲೂ ಶ್ರೇಷ್ಠ ಕೆಲಸ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ಕ್ಷೇತ್ರ ಕೋಡಿಗೆಹಳ್ಳಿಯ ಬೆಂಗಳೂರು ಪಬ್ಲಿಕ್ ಶಾಲೆಯಲ್ಲಿ ಇಂದು 26 ನೂತನ ಮತ್ತು ಅತ್ಯಾಧುನಿಕ ಶಾಲಾ ಕೊಠಡಿಯನ್ನು ಲೋಕಾರ್ಪಣೆ ಮಾಡಲಾಯಿತು. ಅಲ್ಲದೆ, ಕೋಡಿಗೆಹಳ್ಳಿ ರೀತಿಯಲ್ಲೇ ಏಕ ಕಾಲದಲ್ಲಿ ನಗರದ ಇತರೆ ಭಾಗಗಳಲ್ಲೂ 15 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಯಿತು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ಇ-ಆಸ್ತಿ 2.0’ ಆಸ್ತಿ ದಾಖಲೆ ವ್ಯವಸ್ಥೆ ಲೋಕಾರ್ಪಣೆ35 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 23–24 ಲಕ್ಷಕ್ಕೂ ಹೆಚ್ಚು ಆಸ್ತಿ ದಾಖಲೆಗಳ ಗಣಕೀಕರಣಇ-ಆಸ್ತಿ 2.0 ನಲ್ಲಿ ಬಳಕೆದಾರರ ಅನುಭವವನ್ನು ಸುಧಾರಿಸಲಾಗಿದ್ದು, ಪ್ರಕ್ರಿಯೆಗಳನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇ ಆಸ್ತಿ 2.0 ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ… Read more: ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆದಾವಣಗೆರೆ: ಜಿಲ್ಲೆಯಲ್ಲಿ ಎದುರಾಗಿರುವ ಬರಗಾಲದ ಛಾಯೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ, ಕುಡಿಯುವ ನೀರಿನ ಅಭಾವ ಹಾಗೂ ನಾಲೆಯ ನೀರಿನ ಸದ್ಬಳಕೆ ಆಗಬೇಕು ಬೆಸ್ಕಾಂ ಅಧಿಕಾರಿಗಳು ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ರೈತರ ಬೆಳೆಗಳಿಗೆ ಕನಿಷ್ಠ 6 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡಲು ಶ್ರಮಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜಪ್ಪ ಸೂಚಿಸಿದರು. ಮಂಗಳವಾರ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚನ್ನಗಿರಿ, ಮಾಯಕೊಂಡ, ದಾವಣಗೆರೆ… Read more: ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭಬೆಂಗಳೂರು: ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ನ (ಕೆಟಿವಿಎ) ಗೃಹ ಪತ್ರಿಕೆ ‘ಟಿವಿ – ಠೀವಿ – ಕಿರುತೆರೆಯ ಅಂತರಾಳದ ಮಹಾಧ್ವನಿ’ಯನ್ನು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕರಾದ ಎನ್.ಆರ್. ರಮೇಶ್ ಅವರು ಪುನರಾರಂಭಗೊಳಿಸಿದರು. ಈ ಸಂದರ್ಭದಲ್ಲಿ ಕೆಟಿವಿಎ ಅಧ್ಯಕ್ಷ ಗಣೇಶ್ ರಾವ್, ಪತ್ರಿಕೆಯ ಸಂಪಾದಕ ಹಿರಿಯೂರು ರಾಘವೇಂದ್ರ, ಕಾರ್ಯದರ್ಶಿಗಳಾದ ಬೆಳ್ಳಿಚುಕ್ಕಿ ವೀರೇಂದ್ರ, ಪದ್ಮಾ ವಾಸಂತಿ, ರೇಣು ಶಿಕಾರಿ, ಎನ್.ಟಿ. ರಾಮಸ್ವಾಮಿ, ನಟರಾದ ಶ್ರೀನಗರ ಕಿಟ್ಟಿ ಹಾಗೂ ಡಾ. ಎ.ಆರ್. ಗೋವಿಂದಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಿರುತೆರೆ ಕ್ಷೇತ್ರದ… Read more: ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮತ್ತೊಂದು ಸುತ್ತಿನ ಸಮರ? ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಮಾಧ್ಯಮಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದು, ಪ್ರಮುಖ ಅಂತರರಾಷ್ಟ್ರೀಯ ಸುದ್ದಿ ವಾಹಿನಿಗಳು ಹಾಗೂ ಮಾಧ್ಯಮ ಸಂಸ್ಥೆಗಳಿಗೆ ಶ್ವೇತಭವನದ ಪ್ರವೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿರುವುದಾಗಿ ಪ್ರಕಟಿಸಿದ್ದಾರೆ. ಸಿಎನ್ಎನ್ (CNN), ಎಂಎಸ್ಎನ್ಬಿಸಿ (MSNOW/MSNBC) ಹಾಗೂ ಪಾಲಿಟಿಕೋ (Politico) ಸಂಸ್ಥೆಗಳು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ಆರೋಪಿಸಿ ಅವರು ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್… Read more: ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆಬೆಂಗಳೂರು: ರಾಜ್ಯದ 7 ಜಿಲ್ಲೆಗಳ 500 ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ನೆರವಿನ ಯೋಜನೆ ಸಿದ್ಧಗೊಂಡಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಅಧಿಕಾರಿಗಳೊಂದಿಗೆ ಆನ್ ಲೈನ್ ಸಭೆಯಲ್ಲಿ ಮಾತನಾಡಿದ ಅವರು, ಕೆರೆಗಳ ಹೂಳು ತೆಗೆಯುವುದು, ಏರಿ ದುರಸ್ತಿ ಹಾಗೂ ಎತ್ತರಿಸುವುದು, ನಾಲೆಗಳ ಪುನಶ್ಚೇತನ ಮತ್ತು ಸೌಂದರ್ಯೀಕರಣ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿತ ಸಿಇಒಗಳಿಗೆ ಸೂಚಿಸಿದರು. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ, ಜಲಮೂಲಗಳ ಸಂರಕ್ಷಣೆ ಮತ್ತು ಅಂತರ್ಜಲ ಹೆಚ್ಚಳಕ್ಕೆ… Read more: ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಕೃಷ್ಣ ಬೈರೇಗೌಡ, ಯಶಸ್ಸಿಗಿರುವ ಏಕೈಕ ಕೀಲಿಕೈ ಶಿಕ್ಷಣ ಮಾತ್ರ. ಹೀಗಾಗಿ ದುಡಿಯುವ ಶ್ರಮಿಕ ವರ್ಗದ ಮಕ್ಕಳಿಗೂ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಲಭ್ಯವಾಗಬೇಕು. ಈ ಮಕ್ಕಳೂ ಓದಿ ನಾಳೆ ದೊಡ್ಡ ದೊಡ್ಡ ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕು. ದೊಡ್ಡ ಉದ್ಯಮಿಗಳಾಗಿ ನೂರಾರು ಜನರಿಗೆ ಉದ್ಯೋಗ ನೀಡಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರು ಮೌಲ್ಯಯುತ ಶಿಕ್ಷಣದ ಜೊತೆಗೆ ಮಾರ್ಗದರ್ಶನವನ್ನೂ ನೀಡಬೇಕು ಎಂದು ಶಿಕ್ಷಕರಲ್ಲಿ ಮನವಿ ಮಾಡಿದರು.
ಖಾಸಗಿ ಶಾಲೆಗಳಿಗೂ ಮೀರಿದ ಉತ್ತಮ ಸೌಲಭ್ಯಗಳನ್ನು ನಮ್ಮ ಸರ್ಕಾರಿ ಶಾಲೆಗಳಿಗೆ ನೀಡಲು ನಾವು ಬದ್ಧರಾಗಿದ್ದೇವೆ. ಕಳೆದ 15 ವರ್ಷದಲ್ಲಿ ಈ ಶಾಲೆಯಲ್ಲಿ ಮಾತ್ರ ನೂತನ 43 ಶಾಲಾ ಕೊಠಡಿಯನ್ನು ನಿರ್ಮಿಸಲಾಗಿದೆ. 2008ರಲ್ಲಿ 650 ರಷ್ಟಿದ್ದ ವಿದ್ಯಾರ್ಥಿಗಳ ಸಂಖ್ಯೆ ಪ್ರಸ್ತುತ 1150ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಮೂಲಗಳಿಂದ ಹಣ ಹೊಂದಿಸಲಾಗಿದೆ. ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಇತರೆ ಪಠ್ಯೇತರ ಸಾಂಸ್ಕೃತಿಕ ಚಟುವಟಿಕೆಗೂ ಶಾಲಾ ಆವರಣ ಅನುಕೂಲಕರವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಕ್ಷೇತ್ರದ ಜಕ್ಕೂರು, ಬಾಗಲೂರು, ಥಣೀಸಂದ್ರದಲ್ಲಿ ನೂತನ ಪಿಯು ಕಾಲೇಜುಗಳನ್ನು ನಿರ್ಮಿಸಲಾಗಿದೆ. ಕುವೆಂಪು ನಗರ, ಕಟ್ಟಿಗೇನಹಳ್ಳಿಯಲ್ಲಿ ಹೊಸ ಪದವಿ ಕಾಲೇಜುಗಳ ನಿರ್ಮಾಣಕ್ಕೆ ಪ್ರಯತ್ನ ನಡೆಯುತ್ತಿದೆ. ಶಿಕ್ಷಣಕ್ಕೆ ಸಂಬಂಧಿಸಿ ಏನೇ ಬೇಕಿದ್ರೂ ಅದನ್ನು ಪೂರೈಸಲು ನಾವು ಸಿದ್ದರಿದ್ದೇವೆ. ಆದರೆ, ಶಿಕ್ಷಕರು ಮಾತ್ರ ನಮಗೆ ಖಾಸಗಿ ಶಾಲೆಗಳನ್ನೂ ಮೀರಿಸುವ ಫಲಿತಾಂಶ ನೀಡಬೇಕು. ನಮ್ಮ ಪ್ರಯತ್ನಕ್ಕೆ ಮಕ್ಕಳ ಯಶಸ್ಸಿನ ಮುಖಾಂತರ ಪ್ರತಿಫಲ ಸಿಗುವಂತಾಗಬೇಕು. ಬಡ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕೊಟ್ಟರೆ ಮಾತ್ರ ನಾವು ಅಧಿಕಾರಕ್ಕೆ ಬಂದದ್ದಕ್ಕೂ ಸಾರ್ಥಕ ಎಂದರು.
ಸಚಿವ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗಳಂತೆಯೇ ಉತ್ತಮ ಶಿಕ್ಷಣ ಲಭ್ಯವಾಗಬೇಕು ಎಂಬ ನಿಲುವಿನಲ್ಲಿ ನಮ್ಮ ಸರ್ಕಾರ ಗಟ್ಟಿಯಾಗಿದೆ. ಸಮಾಜದ ಎಲ್ಲಾ ವರ್ಗದ ಜನರೂ ಸಮಾನರಾಗಿ ಬದುಕಲು ಸಮಸಮಾಜ ನಿರ್ಮಿಸಲು ಶಿಕ್ಷಣವೊಂದೇ ಮಾರ್ಗ. ಹೀಗಾಗಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ರೂ.70 ಕೋಟಿ ತೆಗೆದಿರಿಸಲಾಗಿದೆ ಎಂದರು.




