ಬೆಂಗಳೂರು: ರಾಜ್ಯದ ಅತ್ಯಂತ ಪ್ರತಿಷ್ಠಿತ ಮತ್ತು ಹೆಮ್ಮೆಯ ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ನೇಮಕಕ್ಕೆ ಸಂಸದ ಹಾಗೂ ಮೈಸೂರು ರಾಜ ವಂಶಸ್ಥ ಯದುವೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದಿದ್ದಾರೆ.
ತಮನ್ನಾ ಭಾಟಿಯಾ ಕರ್ನಾಟಕದ ಸಂಸ್ಕೃತಿ, ಇತಿಹಾಸದೊಂದಿಗೆ ಯಾವುದೇ ನಂಟು ಹೊಂದಿಲ್ಲ. ಕನ್ನಡತನದ ಗಂಧ ಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ “ಗಂಧದ”ದ ಸೋಪಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ ಆರು ಕೋಟಿ ರೂ.ಗಳಿಗೂ ಹೆಚ್ಚು ರೂಪಾಯಿ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ಹೇಳಿದ್ದಾರೆ.
ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ.




