ನಿನ್ನೆ ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರ 1 ಲಕ್ಷಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳಿಗೆ ಭೂ ಮಾಲೀಕತ್ವವನ್ನು ನೀಡಿದ್ದನ್ನು ಸಹಿಸದ ಬಿಜೆಪಿ, ಕರ್ನಾಟಕದ ಅತಿದೊಡ್ಡ ದಲಿತ ನಾಯಕರಲ್ಲಿ ಒಬ್ಬರಾದ, ಕರ್ನಾಟಕದ ಗೃಹಸಚಿವರಾದ ಡಾ. ಜಿ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದುರುದ್ದೇಶಪೂರಿತ ಇಡಿ ದಾಳಿ ನಡೆಸಿದೆ…
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಭಾರತದ ಸಂವಿಧಾನ ಮತ್ತು ಎಸ್ ಸಿ, ಎಸ್ ಟಿ, ಒಬಿಸಿ ಸಮುದಾಯಗಳ ನಾಯಕರ ಮೇಲೆ ದೇಶಾದ್ಯಂತ ನಡೆಯುತ್ತಿರುವ ನಿರಂತರ ದಾಳಿ ಒಂದು ರೀತಿ ರೂಢಿಯಾಗಿಬಿಟ್ಟಿದೆ. @DrParameshwara ಅವರ ಮೇಲಿನ ದಾಳಿ ಕೂಡ ಇದೇ ದುಷ್ಟ ಮಾದರಿಯದ್ದು…
ತುಮಕೂರು ಗ್ರಾಮೀಣ ಭಾಗದಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗಲು ಆರಂಭಿಸಿದ, ಪರಮೇಶ್ವರ್ ಅವರು ನಡೆಸುತ್ತಿರುವ ಸಿದ್ಧಾರ್ಥ ತಾಂತ್ರಿಕ ವಿದ್ಯಾಲಯ ಶುರುವಾಗಿದ್ದು 1979 ರಲ್ಲಿ ಅಂದರೆ 46 ವರ್ಷಗಳ ಹಿಂದೆ, ಸಿದ್ದಾರ್ಥ ಮೆಡಿಕಲ್ ಕಾಲೇಜ್ ಶುರುವಾಗಿದ್ದು 1988 ರಲ್ಲಿ ಅಂದರೆ 28 ವರ್ಷಗಳ ಹಿಂದೆ.
ಸಂಸ್ಥೆ ಶುರುವಾದ 46 ವರ್ಷಗಳ ನಂತರ ಮೋದಿ ಸರ್ಕಾರ ಈಗ ತಪ್ಪನ್ನ ಹುಡುಕುತ್ತಿರೋದು ನಿಜಕ್ಕೂ ಆಶ್ಚರ್ಯವಾದದ್ದು.
ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಸಕ್ರಿಯವಾಗಿ ತನಿಖೆ ನಡೆಸುತ್ತಿರುವ ಗೃಹ ಇಲಾಖೆಯನ್ನು ಮುನ್ನಡೆಸುತ್ತಿರುವ ಗೃಹಸಚಿವ ಪರಮೇಶ್ವರ್ ಅವರ ವಿರುದ್ಧ ನಡೆದಿರುವ ಇಡಿ ದಾಳಿ ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಕುತಂತ್ರ. ಜೊತೆಗೆ ತುಳಿತಕ್ಕೊಳಗಾದವರ ಪರವಾದ ಗಟ್ಟಿಧ್ವನಿಯಾದವರನ್ನು ಕುಗ್ಗಿಸುವ ಒಂದು ಭಾಗ.
Indian National Congress – Karnataka ಪಕ್ಷವು 5 ಗ್ಯಾರಂಟಿಗಳನ್ನು ಮುಂದುವರೆಸುವುದರ ಜೊತೆಗೆ 6 ನೇ ಗ್ಯಾರಂಟಿಯಾದ ಭೂಮಿಯ ಹಕ್ಕನ್ನು sc st ಸಮುದಾಯದ 1 ಲಕ್ಷ ನಮ್ಮ ಸಹೋದರ, ಸಹೋದರಿಯರಿಗೆ ನೀಡುವ ಕೈಂಕರ್ಯವನ್ನು ಬದ್ಧತೆಯಿಂದ ನಿರ್ವಹಿಸಲಿದೆ.
ಸತ್ಯಕ್ಕೆ ಎಂದಿಗೂ ಜಯ.. ಸತ್ಯಮೇವ ಜಯತೆ.
– ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಉಸ್ತುವಾರಿ




