ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ EDಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, EDಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದರು.
ಡಿಸೆಂಬರ್ 24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ EDಯವರು ಲೋಕಾಯುಕ್ತಕ್ಕೆ ವರದಿ ಸಲ್ಲಿಕೆಗೆ ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
ಸಚಿವ ಸಂಪುಟ ಪುನಾರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.




