ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ, ದೆಹಲಿಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮುಂದುವರೆಯಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ರಾಜಕಾರಣಕ್ಕೆ ಮರಳುವಂತಹ ಯಾವುದೇ ವಿಚಾರಗಳು ಚರ್ಚೆಯಾಗಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಬಾರದು ಎಂದು ಸಚಿವ ಸಂಪುಟ ಸಭೆ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ಸಲಹೆ ನೀಡಿತ್ತು. ಅದನ್ನು ಮೀರಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಅದೇ ರೀತಿ ಜೆಡಿಎಸ್ನ ಮುಖಂಡರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯ ಮೂರ್ನಾಲ್ಕು ಶಾಸಕರ ವಿರುದ್ಧದ ಪ್ರಕರಣಗಳಿಗೆ ಅಭಿಯೋಜನೆಗೆ ಅನುಮತಿ ನೀಡಿಲ್ಲ. ಇದು ಪಕ್ಷಪಾತ ಎಂಬುದು ಸ್ಪಷ್ಟವಾಗಿದೆ. ಸಚಿವ ಸಂಪುಟದಲ್ಲಿ ಚರ್ಚೆಯೂ ಆಗಿದೆ ಎಂದರು.
ಆರೋಪಕ್ಕೆ ಗುರಿಯಾದ ಬಹಳಷ್ಟು ನಾಯಕರು ಬಿಜೆಪಿ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್, ಎನ್ಸಿಪಿ ತೊರೆದು ಬಿಜೆಪಿ ಜೊತೆ ಸೇರಿಕೊಂಡ ಬಳಿಕ ಅವರ ಮೇಲಿನ ಆರೋಪಗಳು ಚರ್ಚೆಯಾಗುತ್ತಿಲ್ಲ. ವಾಷಿಂಗ್ ಪೌಡರ್ ನಿರ್ಮಾ ಹಾಕಿ ತೊಳೆದಂತಾಗಿದೆ ಎಂದರು.
ಹಲವು ರಾಜ್ಯಗಳಲ್ಲಿ ಬಿಜೆಪಿಯವರ ಸರ್ಕಾರಗಳಿವೆ. ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ವಿರುದ್ಧ ಯಾರಾದರೂ ಅಭಿಯೋಜನೆಗೆ ಕೇಳಬಹುದು. ಮುಂದಿನ ದಿನಗಳಲ್ಲಿ ಬಿಜೆಪಿಯವರ ತಂತ್ರಗಾರಿಕೆಗಳೇ ತಿರುಗುಬಾಣವಾಗಲಿವೆ ಎಂದರು.
ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ಜೆಡಿಎಸ್ ಸಂಚು ರೂಪಿಸಿದ್ದು, ಬಿಜೆಪಿಯವರು ಅವರ ಜೊತೆ ಕೈಜೋಡಿಸುವುದು ಕಾಂಗ್ರೆಸ್ನ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿದೆ. ನಮ್ಮ ಪಕ್ಷದ ಶಾಸಕರು ಬಿಜೆಪಿ-ಜೆಡಿಎಸ್ನವರ ಆಮಿಶಗಳಿಗೆ ಒಳಗಾಗುವುದಿಲ್ಲ. ಎರಡು ಪಕ್ಷಗಳೂ ಸೇರಿ ಏನೇ ಹರಸಾಹಸ ನಡೆಸಿದರೂ ಅದು ಯಶಸ್ವಿಯಾಗುವುದಿಲ್ಲ ಎಂದರು.
ಮುಂದಿನ ನಾಲ್ಕು ವರ್ಷಗಳ ಬಳಿಕ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಬಿಜೆಪಿಯವರ ಹಗರಣಗಳನ್ನು ತ್ವರಿತವಾಗಿ ಚರ್ಚೆ ನಡೆಸಲಾಗುತ್ತಿದೆ. ಕೆಲವು ಪ್ರಕರಣಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ. ಅವನ್ನು ತೆರವುಗೊಳಿಸಲು ಪ್ರಯತ್ನಿಸಲಾಗುವುದು. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಆಡುತ್ತಿದ್ದಾರೆ. ಹಲವಾರು ಹಗರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದರು.




