ಬೆಂಗಳೂರು: ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ದೆಹಲಿಯಿಂದಲೇ ಸಂದೇಶ ರವಾನಿಸಿದ ಬೆನ್ನಲ್ಲೇ ಅವರ ಆಪ್ತ ಬಣದ ಸಚಿವರು ಬೆಂಗಳೂರಿನಲ್ಲಿ ಸಕ್ರಿಯರಾದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ದೆಹಲಿಯಲ್ಲಿ ಬೀಡು ಬಿಟ್ಟಿರುವ ಡಿಸಿಎಂ ಡಿ ಕೆ ಶಿವಕುಮಾರ್, ತಮ್ಮದೇ ಆದ ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ಅದಕ್ಕೆ ತಿರುಗೇಟು ನೀಡುವ ರೀತಿಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈ ಬೆಳವಣಿಗೆಗಳ ನಡುವೆ ಗೃಹ ಸಚಿವ ಪರಮೇಶ್ವರ್, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ, ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಎಲ್ಲಾ ನಾಯಕರು ನಾಯಕತ್ವ ಬದಲಾವಣೆ ಕುರಿತಂತೆ ಕೆಲವು ಶಾಸಕರು ಮತ್ತು ಮಂತ್ರಿಗಳು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಹೈಕಮಾಂಡ್ ಈ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಇದರಿಂದಾಗಿ ಆಡಳಿತ ಈ ಯಂತ್ರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ನಾಯಕತ್ವ ಬದಲಾವಣೆ ಕುರಿತಂತೆ ಹೈಕಮಾಂಡ್ ಸ್ಪಷ್ಟವಾಗಿ ತಮ್ಮ ತೀರ್ಮಾನವನ್ನು ಪ್ರಕಟಿಸಬೇಕು. ಹಾಗೆ ಪಕ್ಷದ ಯಾವುದೇ ಶಾಸಕರು ಮತ್ತು ಮಂತ್ರಿಗಳು ಈ ಕುರಿತಾಗಿ ಬಹಿರಂಗ ಹೇಳಿಕೆ ನೀಡಿದಂತೆ ಕಟ್ಟಾಜ್ಞೆ ವಿಧಿಸಬೇಕು ಎಂದು ಮನವಿ ಮಾಡಿದ್ದಾರೆ.
ಚರ್ಚೆ ವೇಳೆ ಮಧ್ಯ ಪ್ರವೇಶಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅಧಿಕಾರ ಹಸ್ತಾಂತರ ಕುರಿತಾಗಿ ಹೈಕಮಾಂಡ್ ಮಟ್ಟದಲ್ಲಿ ಸಂಧಾನ ಸೂತ್ರ ಏರ್ಪಟ್ಟಿದ್ದರೆ ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಆದರೆ ನಾಯಕತ್ವ ಬದಲಾವಣೆಯಾಗುವುದಾದರೆ ತಾವು ರಾಜ್ಯ ರಾಜಕಾರಣಕ್ಕೆ ಆಗಮಿಸಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮನವಿ ಮಾಡಿರುವುದಾಗಿ ಗೊತ್ತಾಗಿದೆ.
ಕಾಂಗ್ರೆಸ್ ಪಕ್ಷದ ಮೇಲಿರುವ ತಮ್ಮ ನಿಷ್ಠೆ ಹಾಗೂ ಅನುಭವದ ಆಧಾರದಲ್ಲಿ ಎಂದೋ ಈ ಹುದ್ದೆಯನ್ನು ಅಲಂಕರಿಸಬೇಕಾಗಿತ್ತು. ಆದರೆ ಹಲವಾರು ಕಾರಣಗಳಿಂದ ಇದು ಸಾಧ್ಯವಾಗಿಲ್ಲ. ಇದಕ್ಕೆ ಸಕಾಲವಾಗಿದೆ. ತಾವು ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ದಲಿತ ನಾಯಕರೊಬ್ಬರು ಉನ್ನತ ಹುದ್ದೆಗೇರಿದ ಇತಿಹಾಸ ನಿರ್ಮಿಸಬೇಕು ಎಂದು ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಸಚಿವರಾದ ಈಶ್ವರ್ ಖಂಡ್ರೆ, ಎಚ್ ಸಿ ಮಹಾದೇವಪ್ಪ ಮತ್ತು ದಿನೇಶ್ ಗುಂಡೂರಾವ್ ದನಿಗೂಡಿಸಿದ್ದಾರೆ. ಆದರೆ ಯಾವುದೇ ಪ್ರಸ್ತಾಪ ಕುರಿತಂತೆ ಚಕಾರ ಎತ್ತದ ಮಲ್ಲಿಕಾರ್ಜುನ ಖರ್ಗೆ ಅವರು, ಈ ಎಲ್ಲವನ್ನು ಕೇಳಿಸಿಕೊಂಡು ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ನಮಗೆ ಎಲ್ಲಾ ವರದಿಗಳಿವೆ ಸದ್ಯದಲ್ಲೇ ಗೊಂದಲಗಳಿಗೆ ತೆರೆ ಎಳೆಯುತ್ತೇವೆ. ದಯವಿಟ್ಟು ಯಾರು ಬಹಿರಂಗವಾಗಿ ಮಾತನಾಡಬೇಡಿ. ನಾನು ಈಗ ದೆಹಲಿಗೆ ಹೊರಡುತ್ತಿದ್ದೇನೆ ಎಂದು ಹೇಳಿ ಹೊರ ನಡೆದರು ಎಂದು ಗೊತ್ತಾಗಿದೆ.
ಸೌಜನ್ಯದ ಭೇಟಿ: ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಾವುಗಳು ಮುಖ್ಯಮಂತ್ರಿ ಆಪ್ತ ಸಚಿವರಲ್ಲ. ಕಾಂಗ್ರೆಸ್ ಸರ್ಕಾರದ ಮಂತ್ರಿಗಳು. ನಮ್ಮ ಪಕ್ಷದ ಅಖಿಲ ಭಾರತ ಅಧ್ಯಕ್ಷರು ಬೆಂಗಳೂರಿನಲ್ಲಿ ಇದ್ದರು. ಹೀಗಾಗಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಇದು ಕೇವಲ ಸೌಜನ್ಯದ ಭೇಟಿ ಎಂದರು.
ಸಚಿವ ಮಹದೇವಪ್ಪ , ದಿನೇಶ್ ಗುಂಡೂರಾವ್ ಕೂಡ ಇದನ್ನೇ ಪುನರುಚ್ಚರಿಸಿದರು. ಎಐಸಿಸಿ ಅಧ್ಯಕ್ಷರು ನಮ್ಮವರು ಅವರನ್ನು ಯಾವಾಗ ಬೇಕಾದರೂ ನಾವು ಭೇಟಿ ಮಾಡಬಹುದು. ನಮಗೆ ಅಂತಹ ಸ್ವಾತಂತ್ರ್ಯವಿದೆ. ಇತರೆ ರಾಜ್ಯದವರಂತೆ ಅವರ ಭೇಟಿಗೆ ಮನವಿ ಸಲ್ಲಿಸಿ ಬರುವ ಅಗತ್ಯವಿಲ್ಲ. ಅವರು ಬೆಂಗಳೂರಿನಲ್ಲಿದ್ದಾಗೆಲ್ಲ ಬಂದು ಭೇಟಿಯಾಗುತ್ತಿರುತ್ತೇವೆ. ರಾಜಕೀಯ ಸೇರಿದಂತೆ ಹಲವಾರು ವಿಚಾರ ಚರ್ಚೆ ಮಾಡುತ್ತೇವೆ. ಇದರಲ್ಲಿ ವಿಶೇಷವೇನಿಲ್ಲ ಎಂದರು.



