ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಒಂಟಿ ಮನೆ ಹಾಗೂ ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ 6 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದು,ಇವರ ಬಂಧನದಿಂದ ಪ್ರಕರಣದಲ್ಲಿ ಸೆರೆಯಾದವರ ಸಂಖ್ಯೆ 30ಕ್ಕೇರಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬಂಧಿತ ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10ರಿಂದ 50 ಸಾವಿರದವರೆಗೆ ಶುಲ್ಕ ಸಂಗ್ರಹಿಸುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿದ್ದ ತಂಡ ಕಳೆದ ಹಲವು ವರ್ಷಗಳಿಂದ ದಂಧೆ ನಡೆಸುತ್ತಿತ್ತು. ಆರೋಪಿಗಳು ಪೊಲೀಸ್, ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ದಂಧೆ ನಡೆಸುತ್ತಿದ್ದರು. ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೂ 50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಈ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಭ್ರೂಣ ಲಿಂಗ ಪತ್ತೆಗಾಗಿ ವಿಶೇಷ ವ್ಯವಸ್ಥೆಯನ್ನೇ ಮಾಡಿಕೊಂಡಿರುವುದು ಪತ್ತೆಯಾಗಿದೆ ಇದಕ್ಕಾಗಿ ಕಾರನ್ನು ವಿಶೇಷವಾಗಿ ವಿನ್ಯಾಸ ಮಾಡಿಸಿ ಅದರಲ್ಲಿ ಪ್ರಯೋಗಾಲಯದ ಎಲ್ಲಾ ಉಪಕರಣಗಳನ್ನು ಅಳವಡಿಸಿಕೊಂಡಿದ್ದಾರೆ. ಈ ಮೂಲಕ ಭ್ರೂಣ ಲಿಂಗ ಪತ್ತೆ ಮಾಡಿದ ನಂತರ ಅದಕ್ಕಾಗಿಯೇ ಸಿದ್ಧಪಡಿಸಿದ ಸ್ಥಳದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಆರೋಪಿಗಳನ್ನು ಬಂಧಿಸಿ ಮತ್ತೆ 6 ಜೊತೆಗೆ ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ. ಇನ್ನು ಕೆಲವರು ಈ ದಂಧೆಯಲ್ಲಿ ನಿರತರಾಗಿರುವ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಪೊಲೀಸರು ಮುಂದಾಗಿದ್ದಾರೆ. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಏನಿದು ಪ್ರಕರಣ?: ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವನ್ನು ಬಂಧಿಸಿದ್ದರು. ನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ತಲೆಮರೆಸಿಕೊಂಡಿದ್ದ.
ನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲುಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ದಂಧೆ ಬೇಧಿಸಿ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಐದು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ದಂಧೆ ಮುಂದುವರೆಸಿದ್ದ. ಈತನ ಬಂಧನಕ್ಕಾಗಿ ಏಳು ತಂಡ ರಚಿಸಲಾಗಿತ್ತು. ಕೊನೆಗೂ ಅಭಿಷೇಕ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.




