ಮಂಗಳಸೂತ್ರ, ಕಾಲುಂಗುರ ತೆಗೆಸಿದ ಘಟನೆ ಅಕ್ಷಮ್ಯ: ಅಫ್ಸರ್ ಕೊಡ್ಲಿಪೇಟೆ

2 years ago

#Mangalsutra #anklet #removal #incident #unforgivable #AfsarKodlipet

ಬೆಂಗಳೂರು: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿರುವ, ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಿ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿರುವ ಅವರು, ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಕಲು ತಡೆಯುವ ನೆಪದಲ್ಲಿ ಈ ಹಿಂದೆಯೂ ಮಹಿಳಾ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಈ ರೀತಿಯ ಶೋಷಣೆ ನಡೆದಿದೆ. ಅವರ ಮೇಲೆ ದಬ್ಬಾಳಿಕೆ ನಡೆಸುವ ಉದ್ದೇಶವಲ್ಲದೆ ಬೇರೆ ಯಾವ ಕಾರಣವೂ ಇಂತಹ ಪ್ರಕರಣಗಳಲ್ಲಿ ಕಾಣಲು ಸಾಧ್ಯವಿಲ್ಲ. ಮಂಗಳಸೂತ್ರ, ಕಾಲುಂಗರಗಳ ಮೂಲಕ ಯಾವ ರೀತಿ ನಕಲು ಮಾಡಲು ಸಾಧ್ಯ? ಸಾಮಾನ್ಯ ಜ್ಞಾನ ಇಲ್ಲದ ಕೆಲವು ಅಧಿಕಾರಿಗಳ ಈ ದುಂಡಾ ವರ್ತನೆಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

Leave a Reply