ಬೆಂಗಳೂರು: ಗಾಳಿಪಟ ಹಾರಿಸಲು ಬಳಸುವ ಮಾಂಜಾದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಅನೇಕ ಕಡೆ ಪಾರಿವಾಳ, ಗಿಳಿ, ಕೋಗಿಲೆ, ಹದ್ದು, ಕಾಗೆಗಳಿಗೆ ಈ ಮಾಂಜಾ ಉರುಳಾಗಿ ಪರಿಣಮಿಸಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಗಾಳಿಪಟ ಹಾರಿಸುವ ಸಂದರ್ಭದಲ್ಲಿ ಮರಗಳಿಗೆ ಸಿಲುಕಿ ತುಂಡಾಗಿ ನೇತಾಡುವ ಈ ದಾರದಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿದ್ದಾರೆ.
ಇದರ ಬಳಕೆಗೆ ನಿಯಂತ್ರಣ ವಿಧಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ಕೈಗೊಂಡ ಕ್ರಮಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಹೀಗಾಗಿ ಇದೀಗ ಪರಿಸರ ಇಲಾಖೆ ಈ ದಾರದ ಬಳಕೆ ಮಾತ್ರವಲ್ಲ, ತಯಾರಿಕೆ ಮತ್ತು ಮಾರಾಟ ಸಂಪೂರ್ಣ ನಿಷೇಧಿಸಿದೆ.
ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುವುದನ್ನು ನಿಷೇಧಿಸಿರುವ ಸರ್ಕಾರ ಇದೀಗ ಗಾಳಿ ಪಟಗಳಿಗೆ ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸುವಂತೆ ಸೂಚನೆ ನೀಡಿದೆ.
ಗಾಳಿಪಟ ಹಾರಿಸಲು ಚೀನಿ ದಾರ ಅಥವಾ ಮಾಂಜಾ ದಾರ ಬಳಸುವುದರಿಂದ ಆದ ಅನಾಹುತಗಳ ಬಗ್ಗೆ ನ್ಯಾಯಾಲಯದ ಗಮನ ಸೆಳೆಯಲಾಗಿತ್ತು. ಕೋರ್ಟ್ ಈ ಬಗ್ಗೆ ನೀಡಿದ ಆದೇಶದ ಅನ್ವಯ ಕೇಂದ್ರ ಸರ್ಕಾರ ಈ ಬಗ್ಗೆ ಸೂಕ್ತ ಮಾರ್ಗಸೂಚಿ ಹೊರಡಿಸಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.
ಅದರಂತೆ 2016ರಲ್ಲಿ ರಾಜ್ಯ ಸರ್ಕಾರ ಗಾಳಿಪಟ ಹಾರಿಸಲು ನೈಲಾನ್ ಅಥವಾ ಚೀನಿ ದಾರ ಅಥವಾ ಮಾಂಜಾ ದಾರ ಬಳಕೆಯನ್ನು ನಿಷೇಧಿಸಿತು.
ಇದೀಗ ರಾಜ್ಯ ಸರ್ಕಾರ 2016ರ ಅಧಿಸೂಚನೆಗೆ ಕೆಲ ತಿದ್ದುಪಡಿಯನ್ನು ಮಾಡಿ ಆದೇಶ ಹೊರಡಿಸಿದೆ. ಇದರ ಪ್ರಕಾರ ಯಾವುದೇ ವ್ಯಕ್ತಿ, ಅಂಗಡಿಗಳು, ಸಗಟು ಮತ್ತು ಚಿಲ್ಲರೆ ಮಾರಾಟಗಾರರು ಚೀನಿ ದಾರ ಅಥವಾ ಮಾಂಜಾ ದಾರ ತಯಾರಿಕೆಗೆ ಬಳಸಲಾಗುವ ನೈಲಾನ್ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಚೀನಿ ದಾರ ಅಥವಾ ಮಾಂಜಾ ದಾರ ತಯಾರು, ದಾಸ್ತಾನು ಮಾಡುವುದವುದನ್ನೂ ನಿಷೇಧಿಸಲಾಗಿದೆ. ಒಂದು ವೇಳೆ ಬಳಸಿದ್ದು, ತಯಾರು ಮತ್ತು ಮಾರಾಟ ಮಾಡಿದ್ದು ಕಂಡುಬಂದಲ್ಲಿ ಕಠಿಣಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಇನ್ನು, ಗಾಳಿಪಟ ಹಾರಿಸುವವರು ಯಾವುದೇ ಚೂಪಾದ, ಗಾಜು, ಅಂಟುಗಳು ಅಥವಾ ದಾರವನ್ನು ಬಲಪಡಿಸುವ ವಸ್ತುಗಳಿಂದ ತಯಾರಿಸಿದ ದಾರವನ್ನು ಬಳಸುವಂತಿಲ್ಲ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಗಾಳಿಪಟ ಹಾರಾಟಕ್ಕೆ ಬಳಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.




