ಬೆಂಗಳೂರು: ಧರ್ಮಸ್ಥಳದ ವಿರುದ್ಧ ಮುಸುಕುಧಾರಿ ಚಿನ್ನಯ್ಯನಿಂದ ಹಿಡಿದು ಅನನ್ಯಾ ಭಟ್ ವರೆಗೂ ಸಂಚು ನಡೆದಿರುವುದು ವಿಶೇಷ ತನಿಖಾ ತಂಡ( ಎಸ್ಐಟಿ) ತನಿಖೆಯಲ್ಲಿ ಪತ್ತೆಯಾಗಿದೆ. ಇನ್ನು ಪ್ರಕರಣಕ್ಕೆ ತಿರುವು ನೀಡಿದ್ದ ಬುರುಡೆಯನ್ನು ಹುಡುಕಿ ತಂದಿದ್ದು ಗಿರೀಶ್ ಮಟ್ಟಣ್ಣವರ್ ಎಂದು ಮೂಲಗಳಿಂದ ತಿಳಿದುಬಂದಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್ ನನ್ನು ಎಸ್ಐಟಿ ವಿಚಾರಣೆ ನಡೆಸಿದಾಗ ಹಲವು ಮಾಹಿತಿಗಳು ಬೆಳಕಿಗೆ ಬಂದಿವೆ.
ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್ ಗೆ ಎಸ್ಐಟಿ ನೋಟಿಸ್ ನಿಡಿದೆ. 2024 ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ ಬರೋಬ್ಬರಿ 11 ನಾಗರಿಕರು ಬಲಿಯಾಗಿದ್ದರು. ಇದೇ ಘಟನೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತಪಟ್ಟಿದ್ದ. ಈ ಮನಾಫ್ ಅದೇ ಲಾರಿಯ ಮಾಲೀಕ ಹಾಗೂ ಕೇರಳ ಭಾಗದ ಯೂಟ್ಯೂಬರ್ ಆಗಿದ್ದಾನೆ.
ಯೂಟ್ಯೂಬರ್ ಮನಾಫ್, ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ತನ್ನ ಯೂಟ್ಯೂಬ್ ನಲ್ಲಿ ಕಥೆ ಕಟ್ಟಿದ್ದ. ಜಯಂತ್.ಟಿ ಮೂಲಕ ಬುರುಡೆ ಕಥೆಯನ್ನು ಕೇರಳಕ್ಕೂ ಹಬ್ಬಿಸಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ ಎನ್ನಲಾಗಿದೆ.
ಇನ್ನು ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಮನಾಫ್ ಯುಟ್ಯೂಬ್ ನಲ್ಲಿ ಜುಲೈ 11ರಂದು ಅಪ್ಲೋಡ್ ಆಗಿತ್ತು. ಬಂಗ್ಲೆಗುಡ್ಡೆಯಿಂದಲೇ ಬುರುಡೆ ತಂದಿರುವುದಾಗಿ ಜಯಂತ್.ಟಿ ಹೇಳಿದ್ದಾರೆ. ಕಾಡು ಪ್ರದೇಶದಲ್ಲಿ ಶೂಟ್ ಮಾಡಿರುವ ವಿಡಿಯೋ ಇದಾಗಿದ್ದು, ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಪತ್ತೆಯಾಗಿರುವ ಬುರುಡೆಯನ್ನ ಕತ್ತಿ ಮೂಲಕ ಎತ್ತಿಕೊಂಡು ತಂದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಆ ಮೂಲಕ ಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ವ್ಯಕ್ತವಾಗಿತ್ತು.
ಮನಾಫ್, ಪ್ರಕರಣ ಆರಂಭಕ್ಕೂ ಮೊದಲೇ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ ಸುತ್ತಾಮುತ್ತಾ ಓಡಾಡಿದ್ದ. ಮಹೇಶ್ ತಿಮರೋಡಿ ಮನೆಗೂ ಭೇಟಿ ನೀಡಿ ಹೋರಾಟಕ್ಕೆ ಅಭಿನಂದನೆ ಸಲ್ಲಿಸಿದ್ದ.
ಎಸ್ಐಟಿ ಅಧಿಕಾರಿಗಳ ವಶದಲ್ಲಿರುವ ಚಿನ್ನಯ್ಯ ತಂದಿದ್ದ ಬುರುಡೆ ಎಲ್ಲಿಯದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿ ಪ್ರಶ್ನೆ ಮಾಡಿ ಸುಸ್ತಾಗಿದ್ದರು. ಸದ್ಯ ಇದೀಗ ಚಿನ್ನಯ್ಯ ತಂದಿದ್ದ ಬುರುಡೆ ಎಲ್ಲಿದು ಎನ್ನುವುದು ಗೊತ್ತಾಗಿದೆ.
ಚಿನ್ನಯ್ಯ ತಂದಿದ್ದ ಬುರುಡೆಯನ್ನ ಬಂಗ್ಲೆಗುಡ್ಡೆಯಿಂದ ತಂದಿರುವುದಾಗಿ ಜಯಂತ್ ಹೇಳಿದ್ದಾರೆ. ಅದನ್ನು ತಮಗೆ ಗಿರೀಶ್ ಮಟ್ಟಣ್ಣನವರ್ ತಂದು ಕೊಟ್ಟಿದ್ದರು ಎಂದು ಜಯಂತ್ ತಿಳಿಸಿದ್ದಾರೆ. ಅರಣ್ಯದಲ್ಲಿ ಭೂಮಿಯ ಮೇಲ್ಭಾಗದಲ್ಲಿ ಇದ್ದ ಬುರುಡೆಯನ್ನು ತಂದಿದ್ದರು. ಕಾಡಿನಲ್ಲಿ ಒಂದು ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಬುರುಡೆ ಪತ್ತೆ ಆಗಿದೆ. ಬುರುಡೆಯನ್ನು ಮೇಲೆತ್ತಿಕೊಳ್ಳಬೇಕಾದರೆ ಕತ್ತಿಯನ್ನು ಬಳಕೆ ಮಾಡಿ ಅದನ್ನು ಚೀಲದಲ್ಲಿ ಹಾಕಿಕೊಳ್ಳಲಾಗಿದೆ. ಇದನ್ನು ತರುವ ವಿಡಿಯೋವನ್ನು ಸೆರೆ ಹಿಡಿಯಲಾಗಿದೆ.
ಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ಇದೆ. ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಲಭ್ಯ ಆಗಿದೆ. ಜುಲೈ 11 ರಂದು ಯೂಟ್ಯೂಬರ್ ಕೇರಳದ ಮನಾಫ್ ಯುಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದರಲ್ಲಿಯೇ ಬುರುಡೆ ತಂದಿರುವ ದೃಶ್ಯವಿದೆ.




