ಕಲಬುರ್ಗಿ: ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಚಿವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಂಘಟನಾತ್ಮಕವಾಗಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು ಮುಂದಿನ ಒಂದು ವಾರದೊಳಗೆ ಹಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದಿದ್ದಾರೆ.
ಓಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದಿನಿ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತವೆ. ಈ ಬಗ್ಗೆ ನಿರ್ಧಿಷ್ಟವಾಗಿ ನಾನು ಹೇಳುವುದಕ್ಕೆ ಆಗುವುದಿಲ್ಲ ಎಂದರು.
ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದು ಎರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಮಾಡುತ್ತೇವೆ ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದರು.
ಮಂತ್ರಿಗಳಾದ ಸತೀಶ್ ಜಾರಕಿಹೊಳಿ ಮತ್ತು ಜಿ ಪರಮೇಶ್ವರ್ ಅವರು ತಮ್ಮನ್ನು ಭೇಟಿ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿ, ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿದ್ದೇನೆ. ಹಾಗೆಯೇ ಕರ್ನಾಟಕ ಮೂಲದವನು. ಹೀಗಾಗಿ ಎಲ್ಲರೂ ಬಂದು ತಮ್ಮನ್ನು ಭೇಟಿಯಾಗುತ್ತಾರೆ ಇದರಲ್ಲಿ ವಿಶೇಷವೇನು ಇಲ್ಲ ಎಂದರು.
ಇದಕ್ಕೂ ಮೊದಲು ಡಿಸಿಎಂ ಡಿ ಕೆ ಶಿವಕುಮಾರ್ ನನ್ನನ್ನು ಭೇಟಿ ಮಾಡಿದ್ದರು, ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿದ್ದರು. ಇದಕ್ಕೆಲ್ಲಾ ನಿರ್ದಿಷ್ಟ ಕಾರಣಗಳನ್ನು ಹೇಳುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು.




