ನೂರಾರು ನೌಕರರ ರಕ್ತದಾನದಲ್ಲಿ ಭಾಗಿ
ದಾವಣಗೆರೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಬೆಸ್ಕಾಂ, ಕೆಪಿಟಿಸಿಎಲ್ ನೌಕರರ ಸಂಘ, ಕೆಇಬಿ ಅಧಿಕಾರಿಗಳು, ಬೆಸ್ಕಾಂ ಇಂಜಿನಿಯರ್ಸ್, ರೆಡ್ ಕ್ರಾಸ್ ಸಂಸ್ಥೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಹದಡಿ ರಸ್ತೆಯಲ್ಲಿನ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ನಲ್ಲಿ ಬೃಹತ್ ರ್ತಕದಾನ ಶಿಬಿರ ಆಯೋಜಿಸಲಾಗಿತ್ತು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ರಕ್ತದಾನ ಮಾಡಿದ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ಪ್ರಮಾಣ ಪತ್ರವನ್ನು ವಿತರಣೆ ಮಾಡಿ ಮಾತನಾಡಿ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ, ಇದರಿಂದ ಬೇರೊಂದು ಜೀವಕ್ಕೆ ಮರುಜೀವ ನೀಡಲು ಸಾಧ್ಯವಾಗಿದ್ದು ಇದಕ್ಕಿಂತ ಶ್ರೇಷ್ಠವಾದದು ಬೇರೊಂದಿಲ್ಲ ಎಂದರು.
ಈ ವೇಳೆ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್, ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ರೇವಣಸಿದ್ದಪ್ಪ, ಪಾಲಿಕೆ ಆಯುಕ್ತರಾದ ರೇಣುಕಾ, ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಡಾ; ಎ.ಎಂ.ಶಿವಕುಮಾರ್, ಕಾರ್ಯದರ್ಶಿ ಆನಂದ ಜ್ಯೋತಿ, ಖಜಾಂಚಿ ಅನಿಲ್ ಬಾನಂಗಳ್, ನಿರ್ದೇಶಕರಾದ ಡಾ.ಧನಂಜಯಮೂರ್ತಿ, ನಾಗರಾಜ, ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ಗಳಾದ ವಿನಯ್ಕುಮಾರ್, ರವಿಕಿರಣ್ ಹಾಗೂ ವಿವಿಧ ಅಧಿಕಾರಿಗಳು ಇದ್ದರು.




