ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ
ಕಲಬುರಗಿ: 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2024ರ ಮೇ 15 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
- ಬಿಎಂಟಿಸಿ ಪ್ರಯಾಣಿಕರಿಗೆ ಮತ್ತು ನಮ್ಮ ಬೆಂಗಳೂರಿಗೆ ಶುಭ ದಿನ: ಕೃಷ್ಣ ಬೈರೇಗೌಡ
- ₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ
- ಮಾಚಿದೇವ ಅಭಿವೃಧ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತಿಮ್ಮಪ್ಪನ ದೇವಾಲಯದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂಬ ಸುದ್ದಿ ನಿಜವೇ?
- ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ
ಸದರಿ ಮಾದರಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಗೆ ಶೇ. 75 ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಪ್ರವೇಶ ಪಡೆಯಲಿಚ್ಛಿಸುವ ಆಸಕ್ತಿಯುಳ್ಳ ವಿದ್ಯಾರ್ಥಿಗಳು ನಿರ್ದೇಶನಾಲಯದ ಅಧಿಕೃತ https://dom.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಮೇ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಮೌಲಾನಾ ಆಜಾದ ಮಾದರಿ ಶಾಲೆ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್‍ನ್ನು, ಕಲಬುರಗಿ ಜಿ.ಡಿ.ಎ. ಕಚೇರಿ ಮೊದಲನೇ ಮಹಡಿಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260 ಗೆ ಸಂಪರ್ಕಿಸಲು ಕೋರಲಾಗಿದೆ.


