ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ರಾಜ್ಯ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ ಕೋರ್ಟ್ ಮೆಟ್ಟಿಲಿರಿದ್ದ ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಧಾರದ ಪರ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಬಂದಿದ್ದು, ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು. ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.
ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.




