ಬೆಂಗಳೂರು: ಸರ್ವಾಧಿಕಾರ ಅಳಿಯಲಿ ಸಂವಿಧಾನ ಉಳಿಯಲಿ ಎಂಬ ಘೋಷಣೆಯೊಂದಿಗೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಡುಗೋಡಿಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ, ಸಾರ್ವಜನಿಕ ಕಾರ್ಯಕ್ರಮ ಮತ್ತು ಬೃಹತ್ ವಾಹನ ಜಾಥಾ ನಡೆಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ, ಪ್ರತಿವರ್ಷದಂತೆ ಈ ವರ್ಷವೂ ಏಪ್ರಿಲ್ 14ರಂದು SDPI ರಾಜ್ಯಾದ್ಯಂತ “ಸಾಮಾಜಿಕ ನ್ಯಾಯ ದಿನ” ವಾಗಿ ಆಚರಿಸುತಿದ್ದು, ಸರ್ವಾಧಿಕಾರ ಅಳಿಯಲಿ, ಸಂವಿಧಾನ ಉಳಿಯಲಿ ಎಂದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸಾಗಿದ್ದ ಸಮ ಸಮಾಜ ನಿರ್ಮಾಣದೊಂದಿಗೆ ಸಂವಿಧಾನಿಕ ಮೌಲ್ಯಗಳು, ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ಸಂದೇಶವನ್ನು ನಾವು ಈ ದಿನದ ಮೂಲಕ ಮತ್ತೆ ಒತ್ತಿ ಹೇಳುತ್ತಿದ್ದೇವೆ ಎಂದರು.
ಇಂದಿನ ದಿನಗಳಲ್ಲಿ ಕೇಂದ್ರ ಒಕ್ಕೂಟ ಸರ್ಕಾರ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಹಾಳುಮಾಡುತ್ತ, ಜನ ವಿರೋಧಿ ಹಾಗೂ ಸರ್ವಾಧಿಕಾರಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಈ ದಿನವನ್ನು ಸಂವಿಧಾನ ರಕ್ಷಣೆಯ ದಿನವನ್ನಾಗಿ ಪರಿಗಣಿಸುತ್ತೇವೆ ಎಂದರು.
ಈ ದಿನದಂದೂ ಜನಜಾಗೃತಿ ಜಾಥಗಳು, ಅಂಬೇಡ್ಕರ್ ಸಿದ್ಧಾಂತಗಳ ಕುರಿತ ವಿಶೇಷ ಉಪನ್ಯಾಸಗಳು, ಶೋಷಿತ ಸಮುದಾಯಗಳ ಪೋಷಣೆಗೆ ಪ್ರೇರಿತ ಕಾರ್ಯಕ್ರಮಗಳು ಸೇರಿದಂತೆ ಇತ್ಯಾದಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ಎಸ್‌ಡಿಪಿಐ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ರಿಯಾಜ್ ಅಹ್ಮದ್, ಜಿಲ್ಲಾ ಉಪಾಧ್ಯಕ್ಷರಾದ ಅಡ್ವೊಕೇಟ್ ವಿಜಯನ್, ಆಸೀಫ್ ಅಕ್ರಮ್, ದಲಿತ ಸಂಘರ್ಷ ಸಮಿತಿಯ ಮುಖಂಡರು, ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.




