ಅಲ್ಲಿಯೂ ಸೈ ಇಲ್ಲಿಯೂ ಸೈ
ನಿಮ್ಮೆಲ್ಲರ ಪ್ರೀತಿಯ ಭೀಮಣ್ಣ ನನಗೆ ಭೀಮ್ ಮಾಮ. ಅಂದಿನಿಂದ ಇಲ್ಲಿಯವರೆಗೆ ಸ್ವಲ್ಪ ಕೂಡ ಬದಲಾಗದ ವ್ಯಕ್ತಿತ್ವ. ಮಾತು, ಕೋಪ ತುಂಬಾ ಕಡಿಮೆ. ಆದರೆ ಕೆಲಸ ಎಲ್ಲರಿಗಿಂತ ಜಾಸ್ತಿ. ಯಾವತ್ತು ಕಡಿಮೆ ಆಗದ ಪ್ರೀತಿ ವಿಶ್ವಾಸ. ಅವರಿಗೆ ಕುಟುಂಬದವರಾಗಲಿ, ಊರಿನ ಜನರಾಗಲಿ ಎಲ್ಲರು ಒಂದೇ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಮಾಮ ಅಮೆರಿಕಾದ ಮಿಯಾಮಿ ಅಲ್ಲಿ ಶಿವಣ್ಣ ಅವರ ಟ್ರೀಟ್ಮೆಂಟ್ ಸಮಯದಲ್ಲಿ ಎರಡು ವಾರ ನಮ್ಮ ಜೊತೆಗೆ ಇದ್ದರು. ನನ್ನ ಕೆಲಸಗಳಿಗೆ ಸಹಾಯ, ಶಿವಣ್ಣ ಜೊತೆಗೆ ವಾಕಿಂಗ್, ಕಾಫಿ, ಹಾಸ್ಪಿಟಲ್ ಭೇಟಿಗೆ ಜೊತೆಗೆ ಇರುತ್ತಿದ್ದರು. ಕತ್ತಲಾದಾಗ ಅವರ ಮೊಬೈಲ್ ಫೋನಿಗೆ ಮುಂಜಾವು. ಅವರ ಕ್ಷೇತ್ರದ ಜನರ ಕರೆಗಳು ಬರುತ್ತಿದ್ದವು.
ಎಲ್ಲರ ಜೊತೆ ಸ್ವಲ್ಪವೂ ಬೇಜಾರಿಲ್ಲದೆ ಮಾತನಾಡುತಿದ್ದರು. ದೂರದ ಊರಿನಲ್ಲಿದರು, ಕ್ಷೇತ್ರ ಹಾಗು ಕ್ಷೇತ್ರದ ಜವಾಬ್ದಾರಿಯನ್ನು ಎಂದಿಗೂ ನಿರ್ಲಕ್ಷ್ಯ ಮಾಡಲಿಲ್ಲ.
ನಮ್ಮ ಪ್ರೀತಿಯ ಭೀಮ್ ಮಾಮ, ನಿಮಗೆ ಶಾಸಕರು. ನಮ್ಮ ಕುಟುಂಬದ ಸುಖದುಃಖ ಎರಡರಲ್ಲೂ ಸದಾ ಜೊತೆಗೆ ನಿಂತವರು. ನಿಮ್ಮ ಶಾಸಕರಾಗಿ ಅವರು ಸದಾ ನಿಮ್ಮ ಜೊತೆಯಲ್ಲಿ ನಿಂತಿರಲಿ ಹಾಗು ಅವರ ಮತ್ತು ನಿಮ್ಮ ಮುಗುಳ್ನಗೆ ಎಂದಿಗೂ ಮಾಸದಿರಲಿ ಎಂದು ಎಂದು ದೇವರಲ್ಲಿ ನಾನು ಹಾಗು ಶಿವರಾಜಕುಮಾರ್ ಅವರು ಕೇಳಿಕೊಳ್ಳುತೇವೆ.
ಇಂತಿ,
ಗೀತಾ ಶಿವರಾಜಕುಮಾರ್ ಹಾಗು ಶಿವರಾಜಕುಮಾರ್







