ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನ ವಾಣಿಜ್ಯ ಪ್ರದೇಶ ಅವಿನ್ಯೂ ರಸ್ತೆಯಲ್ಲಿನ ಅಂಗಡಿ ಮಾಲಿಕ ತನ್ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇತರೆ ಸಿಬ್ಬಂದಿ ಜೊತೆ ಸೇರಿ ಮಹಿಳೆಯೊಬ್ಬರ ಮೇಲೆ ಪೈಶಾಚಿಕವಾಗಿ ವರ್ತಿಸಿದ್ದಾನೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮ್ಮ ಅಂಗಡಿಯಲ್ಲಿ ಸೀರೆ ಹಾಗೂ ಹಣ ಕಳವು ಮಾಡಿದ್ದಾಳೆ ಎಂದು ಮಹಿಳೆಯೊಬ್ಬರನ್ನು ಹಿಡಿದು ಮನಬಂದಂತೆ ಥಳಿಸಿದ್ದಾನೆ. ಬೂಟು ಕಾಲಿನಿಂದ ಪದೇ ಪದೇ ಒದೆಯುವ ಮೂಲಕ ಅಮಾನುಷವಾಗಿ ವರ್ತಿಸಿದ್ದಾನೆ.
ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಅಲಿಯಾಸ್ ಉಮೇದ್ ರಾಮ್ ಎಂಬುವರು ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ದೃಶ್ಯಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳನ್ನು ನೋಡಿದ ಸಾರ್ವಜನಿಕರು ಅಂಗಡಿಯ ಮಾಲೀಕನ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಯ ಬಗ್ಗೆ ಕ್ರಮ ಕೈಗೊಳ್ಳದ ಪೊಲೀಸ್ ವ್ಯವಸ್ಥೆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಂಧನ: ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆ ಮೇಲೆ ಕ್ರೌರ್ಯ ಮೆರೆದ ಬಟ್ಟೆ ಅಂಗಡಿ ಮಾಲೀಕ ಹಾಗೂ ಕೆಲಸಗಾರನನ್ನು ಬಂಧಿಸಿದ್ದಾರೆ.
ಮಾಯಾ ಸಿಲ್ಕ್ & ಸ್ಯಾರೀಸ್ ಅಂಗಡಿಯ ಮಾಲೀಕ ಉಮೇದ್ ರಾಮ್ ಮತ್ತು ಮತ್ತೊಬ್ಬ ಮಹೇಂದ್ರ ಶರ್ಮಾ ಬಂಧಿತ ಆರೋಪಿಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ & ಸ್ಯಾರೀಸ್ ಅಂಗಡಿಗೆ ಆಂಧ್ರಪ್ರದೇಶದ ಗುಂತಕಲ್ ವಾಸಿ ಮಹಿಳೆಯು ಬಟ್ಟೆ ಅಂಗಡಿಯೊಂದಕ್ಕೆ ಖರೀದಿಗೆ ತೆರಳಿದ್ದ ಮಹಿಳೆ, ಸೀರೆ ಕಳವು ಮಾಡಿದ್ದಾಳೆ ಎಂದು ಆರೋಪಿಸಿ ಅಂಗಡಿಯಿಂದ ಹೊರಗೆಳೆದು ತಂದು ಹಲ್ಲೆ ನಡೆಸಿ, ಬೂಟುಗಾಲಿನಲ್ಲಿ ಒದ್ದಿದ್ದರು.
ಆಕೆಯ ಮಗನ ಮುಂದೆಯೇ ಉಮೇದ್ ರಾಮ್ ಮತ್ತು ಮಹೇಂದ್ರ ಶರ್ಮಾ ಅಮಾನುಷವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿದರು.




