ಕನ್ನಡ ಚಿತ್ರರಂಗದಲ್ಲಿ ಸಾರ್ಥಕ 4 ದಶಕಗಳನ್ನು ಪೂರೈಸಿರುವ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅಭಿನಂದನೆಗಳು. ಬಿಡುವಿನ ವೇಳೆ ಶಿವರಾಜ್ ಕುಮಾರ್ ಅವರ ಹಲವು ಸಿನಿಮಾಗಳನ್ನು ನಾನು ನೋಡಿ ಆನಂದಿಸಿದ್ದೇನೆ.
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
ರಥಸಪ್ತಮಿ, ಜನುಮದ ಜೋಡಿ, ಜೋಡಿಹಕ್ಕಿ, ಟಗರು ಹೀಗೆ ಸಾಲು ಸಾಲು ಹಿಟ್ ಸಿನೆಮಾಗಳ ಮೂಲಕ ಕನ್ನಡ ಚಿತ್ರರಂಗದ ಕೀರ್ತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶಿವರಾಜ್ ಕುಮಾರ್ ಅವರ ಅಭಿನಯಕ್ಕೆ ಅವರೇ ಸಾಟಿ.
ಕಲಾಸೇವೆಯ ಜೊತೆ ಸಾಮಾಜಿಕ ಸೇವೆಯಲ್ಲೂ ನಿರತರಾಗಿರುವ ಕನ್ನಡಿಗರ ಪ್ರೀತಿಯ ಶಿವಣ್ಣನಿಗೆ ಭಗವಂತ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
– ಸಿದ್ದರಾಮಯ್ಯ, ಸಿಎಂ




