ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವ ಉದ್ಯಮಿ ಮೋಹನದಾಸ್ ಪೈ ವೈಖರಿಗೆ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋಹನ್ ದಾಸ್ ಪೈ ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದರು.
ಮೋಹನ್ ದಾಸ್ ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ ಎಂದರು.
ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದರು.
ಬೆಂಗಳೂರು ‘ಗ್ರೋಯಿಂಗ್ ಸಿಟಿ’ಯ ಜತೆಗೆ ‘ಗ್ಲೋಬಲ್ ಸಿಟಿ’ ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದರು.
ಯಾರೇ ಆಗಲಿ, ಸರಕಾರಕ್ಕೆ ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.




