ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳ ಹೆಸರು ಬದಲಾವಣೆ ಮಾಡುವಂತೆ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಈ ರೈಲು ನಿಲ್ದಾಣಗಳಿಗೆ ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ನಾಮಕರಣ ಮಾಡುವಂತೆ ಹೆಸರುಗಳನ್ನು ಸಲಹೆ ಮಾಡಿದ್ದಾರೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ರಾಜ್ಯ ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದರು.
ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ತಾವು ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಕೋರಿರುವುದಾಗಿ ಹೇಳಿದರು.




