ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ: ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನಲ್ಲಿ 2015-16 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟ ವರ್ಗದ ಅಲೆಮಾರಿ, ಅರೆಅಲೆಮಾರಿ ಮತ್ತು ಸೂಕ್ಷ್ಮ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವ ಸಂಬಂಧ ಮೇದಾರ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮವನ್ನು ರಚಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಧಾರವಾಡ ಜಿಲ್ಲೆಯಲ್ಲಿ 2023-24 ಹಾಗೂ 2024-25 ನೇ ಸಾಲಿನ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ವಿವಿಧ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಸಮುದಾಯದ ಮೂರು ಜನ ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡಲಾಗುತ್ತದೆ.
ಧಾರವಾಡ ಜಿಲ್ಲೆಯ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಕ್ಕೆ ಸೇರಿದ ಮತ್ತು ಸದರಿ ಸಮುದಾಯಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಪ್ರತಿನಿಧಿಗಳಿಂದ ಜಿಲ್ಲಾ ಸಮಿತಿಗೆ ನಾಮನಿರ್ದೇಶನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು ಅವಶ್ಯಕ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಧಾರವಾಡ ಅಥವಾ ಸಂಬಂಧಿಸಿದ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಡಿಸೆಂಬರ 10 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ 0836-2447201 ಗೆ ಸಂಪರ್ಕಿಸಬಹುದು.




