ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ತಮಿಳುನಾಡಿಗೆ ತೆರಳಿ ಪ್ರತ್ಯಂಗಿರಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಪೂಜೆಯ ಕಾರಣವನ್ನು ಬಹಿರಂಗಪಡಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರುನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ರಕ್ಷಣೆ ಸಿಗಲಿ ಎಂಬುದಾಗಿ ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದರು.
ಮಾಧ್ಯಮಗಳು ಕೂಡ ನನಗೆ ತೊಂದರೆ ಕೊಡುತ್ತಿವೆ. ಸುಳ್ಳು ಸುದ್ದಿಗಳ ಮೂಲಕ ಅಪಪ್ರಚಾರ ಮಾಡುತ್ತಿವೆ. ಇದರಿಂದಲೂ ನನಗೆ ರಕ್ಷಣೆ ಸಿಗಲಿ ಎಂದು ವಿಶೇಷ ಪೂಜೆ ಸಲ್ಲಿಸುವುದಾಗಿ ತಿಳಿಸಿದರು.
ನಾನು ದೇವರ ಮೇಲೆ ನಂಬಿಕೆ ಇಟ್ಟಿರುವ ವ್ಯಕ್ತಿ. ನನಗೆ ಧರ್ಮ, ದೇವರು, ಆಚರಣೆಗಳ ಮೇಲೆ ನಂಬಿಕೆಯಿದೆ. ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೋ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದರು.
ನಾನು ಪ್ರತಿದಿನ ಪೂಜೆ ಮಾಡುತ್ತಿರುತ್ತೇನೆ, ಪ್ರತಿದಿನವೂ ದೇವರನ್ನು ನೋಡುತ್ತಿರುತ್ತೇನೆ, ಹೋಮಗಳನ್ನು ಮಾಡಿಸುತ್ತೇನೆ, ನನ್ನ ಮನಸ್ಸಿಗೆ ನೆಮ್ಮದಿ-ಸಮಾಧಾನಕ್ಕಾಗಿ ಪೂಜೆ ಮಾಡಿಸುತ್ತೇನೆ ಎಂದರು.
ದೇವರ ಮೇಲೆ, ಆಚರಣೆಗಳ ಮೇಲೆ, ಧರ್ಮದ ಮೇಲೆ ನಂಬಿಕೆ ಇದೆ. ದೇವರಿಗೆ ನಮಸ್ಕರಿಸದೆ ನಾನು ನಂಬಿರುವ ಶಕ್ತಿಗೆ ನಮಿಸದೆ ಮನೆಯಿಂದ ಹೊರಬರುವುದಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ಅವರು ಶತ್ರುಗಳ ನಾಶಕ್ಕಾಗಿ ವಿಶೇಷ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪ್ರತಿದಿನ ಪೂಜೆ ಮಾಡುತ್ತೇನೆ. ನನಗೆ ಒಳ್ಳೆಯದಾಗಲಿ, ನನಗೆ ಯಾರು ತೊಂದರೆ ಕೊಡುತ್ತಾರೋ ಅವರಿಂದ ರಕ್ಷಣೆ ಸಿಗಲಿ ಎಂದು ಪೂಜೆ ಮಾಡಿಸುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.




