ಮಾಧ್ಯಮದವರೇ ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿ.ಕೆ.ಶಿವಕುಮಾರ್

2 years ago

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ, ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ ಎಂದರು.

ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ ಎಂದರು.

ರಾಜ್ಯದಲ್ಲಿ ಎಂಟು ತಿಂಗಳ ಮಗುವಿನಲ್ಲಿ ಎಚ್ ಎಂ ವಿ ವೈರಸ್ ಪತ್ತೆಯಾಗಿರುವ ಕುರಿತು ಇದೇ ವೇಳೆ ಮಾತನಾಡಿದ ಅವರು, ಈಗಾಗಲೇ ನಮ್ಮ ಆರೋಗ್ಯ ಸಚಿವರು ಕೆಲಸ ಮಾಡುತ್ತಿದ್ದಾರೆ. ಯಾರೂ ಸಹ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದೆ ಎಂದರು.

Leave a Reply