ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಗೊಂದಲಗಳನ್ನು ಪರಿಹರಿಸಲು ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು ರಾಜ್ಯಾದ್ಯಂತ ಸಮೀಕ್ಷೆ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಆರಂಭದಲ್ಲಿ ವಿಘ್ನ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಅಂದುಕೊಂಡಷ್ಟು ವೇಗವಾಗಿ ಸಮೀಕ್ಷೆ ಕಾರ್ಯ ನಡೆಸಲು ಅಡ್ಡಿಯಾಗಿದೆ. ಅಲ್ಲದೆ ಸಮೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇನೆ ಎಂದರು.
ಆನ್ಲೈನ್ ಮುಖಾಂತರ ಜನರ ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ವೇಳೆ ಸರ್ವರ್ ಸಮಸ್ಯೆ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುತ್ತೇನೆ. ಸಮೀಕ್ಷೆ ಸಂಬಂಧ ಉದ್ಭವವಾಗಿರುವ ಗೊಂದಲಗಳ ಬಗ್ಗೆ ಸಮಾಲೋಚಿಸಿ ಇತ್ಯರ್ಥ ಪಡಿಸಲಾಗುವುದು ಎಂದರು.
ಸಮೀಕ್ಷೆಗೆ ಸಂಬಂಧಿಸಿದಂತೆ ನನ್ನ ಮುಂದೆ ಯಾವ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಬದಲಾಗಿ ಕೆಲವರು ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಆದಷ್ಟು ಬೇಗ ಸಮೀಕ್ಷೆ ಆರಂಭಿಸಲಾಗುವುದು. ಆಯೋಗದ ಎಲ್ಲಾ ವಿಚಾರಗಳಲ್ಲಿಯೂ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದರು.




