ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ಇಂದು ನನ್ನನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಎರಡು ಗಂಟೆಗೂ ಅಧಿಕ ಸಮಯ ಚರ್ಚಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ “ಫ್ರೂಟ್ಸ್ʼ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ ಖಾತೆಗೆ ನೇರವಾಗಿ ಬರ ಪರಿಹಾರ ತಲುಪಿಸುವುದು ಸಾಧ್ಯವಾಗುತ್ತಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್ ಆ್ಯಪ್ ಹಾಗೂ ಆಧಾರ್ ಸೀಡಿಂಗ್ ಹಾಗೂ ಫೌತಿ ಖಾತೆ ಅಭಿಯಾನದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವವಾದದ್ದು. ಹೀಗಾಗಿ ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಎಲ್ಲಾ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೆ, ಅವರ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಸಭೆಯಲ್ಲಿ ಭರವಸೆ ನೀಡಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್ಟಾಪ್ ನೀಡಬೇಕು ಎಂಬ ಬೇಡಿಕೆ ಇದೆ. ಸರ್ಕಾರವೂ ಈಗಾಗಲೇ ಈ ಬಗ್ಗೆ ಚಿಂತನೆ ನಡೆಸಿದೆ. ಫೀಲ್ಡ್ ನಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಲ್ಯಾಪ್ಟಾಪ್-ಮೊಬೈಲ್ ಎರಡೂ ರೀತಿ ಕೆಲಸ ಮಾಡಬಲ್ಲ ಟ್ಯಾಬ್ ನೀಡುವ ಬಗ್ಗೆ ಚಿಂತಿಸಲಾಗಿದೆ. ಈಗಾಗಲೇ ಸಣ್ಣ ಪ್ರಮಾಣದಲ್ಲಿ ಅಧಿಕಾರಿಗಳಿಗೆ ಟ್ಯಾಬ್ ವಿತರಿಸಲಾಗಿದ್ದು, ಮುಂದಿನ ವರ್ಷದೊಳಗೆ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್ ನೀಡಲು ಸರ್ಕಾರ ಹಾಗೂ ಇಲಾಖೆ ಬದ್ಧವಾಗಿದೆ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಿಗೂ ಸರ್ಕಾರಿ ಕಚೇರಿ ನಿರ್ಮಿಸಬೇಕು ಮೂಲಭೂತ ಸೌಲಭ್ಯ ಒದಗಿಸಬೇಕು ಎಂಬ ಪ್ರಮುಖ ಬೇಡಿಕೆ ಇದೆ. ಸರ್ಕಾರಿ ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂಬ ವಿಚಾರದಲ್ಲಿ ನನ್ನ ಅಭಿಪ್ರಾಯವೂ ಅದೇ ಆಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದರು.
ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲೆ ವರ್ಗಾವಣೆ ನೀಡುವ ಸಂಬಂಧ ಕೆಸಿಎಸ್ಆರ್ 16A ನಿಯಮದ ಅನ್ವಯ ನಿಯಮಬದ್ಧವಾಗಿ ಬಂದಿರುವ ಪ್ರಸ್ತಾವನೆಗಳ ಕುರಿತು ಮುಂದಿನ ವಾರದೊಳಗೆ ಕ್ರಮವಹಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಆಡಳಿತ ಅಧಿಕಾರಿಗಳನ್ನು ಅನಗತ್ಯವಾಗಿ ಎಸಿ ಡಿಸಿ ಕಚೇರಿಗಳಿಗೆ ಮಾಡಲಾಗಿರುವ ಡೆಪ್ಯುಟೇಷನ್ (ನಿಯೋಜನೆ) ರದ್ದುಗೊಳಿಸುವ ಸಂಬಂಧ ಈಗಾಗಲೇ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಉಳಿದಂತೆ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರ್ಕಾರದಿಂದ ಸಾಧ್ಯವಾಗುವ ಎಲ್ಲಾ ಬೇಡಿಕೆಗಳ ಬಗ್ಗೆಯೂ ಚಿಂತಿಸಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಅಲ್ಲದೆ, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಪರಿಶೀಲಿಸುವ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ಬೆಂಗಳೂರು ವಲಯದ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಶ್ವಾಸ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಹೀಗಾಗಿ ಅವರು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಜೊತೆ ಚರ್ಚಿಸಲಿದ್ದಾರೆ. ಆಮ್ಲನ್ ಆದಿತ್ಯ ಬಿಶ್ವಾಸ್ ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸೇರಿದಂತೆ ಸಂಬಂಧಿತ ಎಲ್ಲಾ ಹಿರಿಯ ಅಧಿಕಾರಿಗಳೂ ಭಾಗಿಯಾಗಿದ್ದರು.




